ADVERTISEMENT

ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ

​ಪ್ರಜಾವಾಣಿ ವಾರ್ತೆ
Published 26 ಮೇ 2017, 5:30 IST
Last Updated 26 ಮೇ 2017, 5:30 IST

ಗೌರಿಬಿದನೂರು: ‘ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ಮನದಟ್ಟುಮಾಡುವ ಮೂಲಕ ಬಿಜೆಪಿಯನ್ನು ಬೂತ್ ಮಟ್ಟದಿಂದ ಸಂಘಟಿಸಬೇಕು’ ಎಂದು ರಾಜ್ಯ ಬಿಜೆಪಿ ಕಾರ್ಯಕಾರಣೆ ಸದಸ್ಯ ಎನ್.ಎಂ, ರವಿನಾರಾಯಣರೆಡ್ಡಿ ಸಲಹೆ ನೀಡಿದರು.

ಪಟ್ಟಣದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ತಾಲ್ಲೂಕು ಬಿಜೆಪಿ ಮಂಡಲ ಘಟಕ ಗುರುವಾರ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕಾರಿಣೆ ಸಭೆಯಲ್ಲಿ ಅವರು ಮಾತನಾಡಿದರು.
‘ದೇಶದಲ್ಲಿ ಬಿಜೆಪಿ ತತ್ವ ಸಿದ್ಧಾಂತಗಳಿಂದ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ.ಬಿಜೆಪಿ ಮತದಾರರಿಗೆ ಯಾವುದೇ ಆಸೆ ಆಮಿಷಗಳು ತೋರಿಸಿದೆ ಒಬ್ಬ ವ್ಯಕ್ತಿ ಹೇಗೆ ತನ್ನ ಜೀವನವನ್ನು ಹೇಗೆ ರೂಪಿಸಿಕೊಳ್ಳಬೇಕು ಎಂಬುವುದನ್ನು ಕಲಿಸಿಕೊಡುತ್ತದೆ’ ಎಂದರು.

‘ಗೌರಿಬಿದನೂರಿನಲ್ಲಿ ಜೂನ 10ರಂದು ಬಿಜೆಪಿ ಜನಸಂಪರ್ಕ ಸಮಾವೇಶವನ್ನು ಏರ್ಪಡಿಸಲಾಗಿದ್ದು ಈ ಸಭೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ನಾಯಕರು ಆಗಮಿಸುವರು.

ADVERTISEMENT

ಸಭೆಗೆ ತಾಲ್ಲೂಕಿನಿಂದ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಹೇಳಿದರು. ಮುಖಂಡರಾದ ಕೃಷ್ಣಮೂರ್ತಿ, ವೇಮಾ ರೆಡ್ಡಿ, ರಾಮಕೃಷ್ಣಾರೆಡ್ಡಿ, ರಂಗನಾಥ್, ರಮೇಶ್ ರಾವ್, ನಾರಾಯಣರೆಡ್ಡಿ, ಶಶಿಧರ್, ಜಯಣ್ಣ, ಆನಂದರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.