ADVERTISEMENT

ಮಳೆಯಲ್ಲೇ ನಡೆದ ಅಣಕು ಪ್ರಾತ್ಯಕ್ಷಿಕೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2015, 10:01 IST
Last Updated 6 ಅಕ್ಟೋಬರ್ 2015, 10:01 IST

ಚಿಕ್ಕಬಳ್ಳಾಪುರ: ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಲ್ಲೇ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಸೋಮವಾರ ತುರ್ತು ಸೇವೆ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಣಕು ಪ್ರಾತ್ಯಕ್ಷಿಕೆ ನೀಡಿದರು.

ಸುಮಾರು 1 ಗಂಟೆಗೂ ಹೆಚ್ಚು ಕಾಲ ಪ್ರಾತ್ಯಕ್ಷಿಕೆ ಪ್ರದರ್ಶಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದರು. ಆದರೆ ದಿಢೀರ್ ಮಳೆ ಶುರುವಾಯಿತು. ಮಳೆಯಲ್ಲೇ ಕೆಲ ಹೊತ್ತು ನೀರಿನ ಕಸರತ್ತು ಪ್ರದರ್ಶಿಸಿದ ಬಳಿಕ ಪ್ರಾತ್ಯಕ್ಷಿಕೆ ಸ್ಥಗಿತಗೊಳಿಸಿದರು.

ಅಗ್ನಿ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಯಾವುದೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕಟ್ಟಡಕ್ಕೆ ಅಥವಾ ಮೈಗೆ ತಗುಲಿದಾಗ, ಏನೆಲ್ಲಾ ಸುರಕ್ಷತಾ ಕ್ರಮಗಳು ಅನುಸರಿಸಬೇಕೆಂದು ಅಧಿಕಾರಿಗಳು ಮತ್ತು ಸಿಬ್ಬಂದಿ ಮಾಹಿತಿ ನೀಡಿದರು.
ಕಾಲೇಜಿನ ರಾಷ್ಟ್ರೀಯ ಸೇವಾ ಘಟಕದವರು (ಎಸ್‌ಎಸ್‌ಎಸ್‌) ಅಣಕು ಪ್ರಾತ್ಯಕ್ಷಿಕೆ ನಡೆಸಿಕೊಡುವಂತೆ ಕೋರಿದ್ದರು ಎಂದು ಅವರು ತಿಳಿಸಿದರು.

ಅಗ್ನಿಶಾಮಕ ಇಲಾಖೆಯ ಜಿಲ್ಲಾ ಅಧಿಕಾರಿ ಅಶೋಕ್‌ಬಾಬು, ಸಿಬ್ಬಂದಿ ಕೆ.ಪೂಸ್ವಾಮಿ, ರವಿ, ನರಸಿಂಹಮೂರ್ತಿ ಇತರರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.