ADVERTISEMENT

ಮೂರು ವರ್ಷದಲ್ಲಿ ಎತ್ತಿನಹೊಳೆ ಯೋಜನೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2015, 10:09 IST
Last Updated 31 ಆಗಸ್ಟ್ 2015, 10:09 IST

ಚಿಕ್ಕಬಳ್ಳಾಪುರ: ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಮೂರು ವರ್ಷದೊಳಗೆ ಬಯಲುಸೀಮೆ ಜಿಲ್ಲೆಗೆ ನೀರು ಹರಿಯಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಸಂಸದ ವೀರಪ್ಪ ಮೊಯಿಲಿ ತಿಳಿಸಿದರು.

ನಗರಕ್ಕೆ ಭಾನುವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆಸಕ್ತಿ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆ ಪೂರ್ಣಗೊಳಿಸಲು ಬದ್ಧರಾಗಿದ್ದಾರೆ ಎಂದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿನ ಕೆರೆಗಳಿಗೆ ನೀರು ಬಿಡಲಾಗುವುದು. ನಂತರ ವರ್ಷವಿಡಿ ಕುಡಿಯುವ ನೀರು ಸಿಗಲಿದೆ. ಯೋಜನೆಗೆ ಯಾರದ್ದು ಸಹ ಆಕ್ಷೇಪಣೆಯಿಲ್ಲ. ಸರ್ವ ಪಕ್ಷಗಳ ಸಹಕಾರ, ಒಪ್ಪಿಗೆ ಮೆರೆಗೆ ಯೋಜನೆ ಕಾಮಗಾರಿ ಮುಂದುವರಿದಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.