ADVERTISEMENT

5ಕ್ಕೆ ರೈತ ಚೈತನ್ಯ ಯಾತ್ರೆ: ಪೂರ್ವ ಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2015, 11:17 IST
Last Updated 3 ಸೆಪ್ಟೆಂಬರ್ 2015, 11:17 IST

ಗೌರಿಬಿದನೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆ ನಿರಂತರವಾಗಿ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ತಡೆಯುವಲ್ಲಿ ವಿಫಲವಾಗಿದೆ ಎಂದು ಮಾಜಿ ಶಾಸಕಿ ಎನ್.ಜ್ಯೋತಿರೆಡ್ಡಿ ಆಕ್ರೋಶ ವ್ಯಕ್ತಪಡಿದರು.

ಪಟ್ಟಣದ  ಗಾಂಧಿ ವೃತ್ತದಲ್ಲಿ ಸೆ. 5ರಂದು ಮಧ್ಯಾಹ್ನ 2 ಗಂಟೆಗೆ ಬಿಜೆಪಿ ಕೈಗೊಂಡಿರುವ ರೈತ ಚೈತನ್ಯ ಯಾತ್ರೆ ಕಾರ್ಯಕ್ರಮದ  ಅಂಗವಾಗಿ ಬುಧವಾರ ಕರೆಯಲಾಗಿದ್ದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.

ರೈತರ ಆತ್ಮಹತ್ಯೆಗಳ ಬಗ್ಗೆ  ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಕ್ತ ಪರಿಹಾರ ಮಾರ್ಗ ಹುಡುಕುವುದನ್ನು ಬಿಟ್ಟು ಕೇವಲ ಭರವಸೆ ನೀಡುತ್ತಿದ್ದಾರೆ. ರೈತರ ಎಲ್ಲ ಸಾಲ ಮನ್ನಾ ಮಾಡಬೇಕು. ಅಗತ್ಯವಿರುವ ರೈತರಿಗೆ ತಕ್ಷಣ ಹೊಸ ಸಾಲ ಸೌಲಭ್ಯ ನೀಡಬೇಕು. ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ತಕ್ಷಣ ಪರಿಹಾರ ಹಣ ಒದಗಿಸಬೇಕು. ರೈತರ ಕೊಳವೆಬಾವಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಹಾಲಿನ ದರವನ್ನು ಹೆಚ್ಚಿಸಿ ಎಸ್.ಎನ್.ಎಫ್ ಸೂತ್ರ ಕೈಬಿಟ್ಟು ಪ್ರೋತ್ಸಾಹ ಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಎಂ.ಎನ್.ರವಿನಾರಾಯಣರೆಡ್ಡಿ ಮಾತನಾಡಿ, ತಾಲ್ಲೂಕಿನ ನಲ್ಲಚರುವು ಕೆರೆ ಒತ್ತುವರಿ ತೆರವುಗೊಳಿಸಬೇಕು. ಮರಳೂರು ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು ಅತಿಕ್ರಮಿಸಿಕೊಂಡಿರುವ ಸರ್ಕಾರಿ ಖರಾಬು ಜಮೀನು ತೆರವುಗೊಳಿಸಬೇಕು. ಹೊಸೂರು ಗ್ರಾಮದ ಗೋಮಾಳವನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಿನಾಥ್, ಮುಖಂಡರಾದ ವೆಂಕಟರಾಮರೆಡ್ಡಿ, ರಮೇಶ್ ರಾವ್, ನಾರಾಯಣರೆಡ್ಡಿ, ಮಾರುಕಟ್ಟೆ ಮೋಹನ್, ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.