ADVERTISEMENT

ಬಿಜೆಪಿ ‘ಪರಿವರ್ತನಾ ಯಾತ್ರೆ’: ಜನರನ್ನು ಹಿಡಿದಿಡಲು ಆರ್ಕೆಸ್ಟ್ರಾ, ವೇದಿಕೆಯಲ್ಲಿ ಯುವತಿಯರ ಮಾದಕ ಕುಣಿತ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 10:53 IST
Last Updated 12 ಜನವರಿ 2018, 10:53 IST
ಬಾಗೇಪಲ್ಲಿಯಲ್ಲಿ ‘ಪರಿವರ್ತನಾ ಯಾತ್ರೆ’ಯ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲಿ ಕಂಡುಬಂದ ದೃಶ್ಯವಿದು.
ಬಾಗೇಪಲ್ಲಿಯಲ್ಲಿ ‘ಪರಿವರ್ತನಾ ಯಾತ್ರೆ’ಯ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲಿ ಕಂಡುಬಂದ ದೃಶ್ಯವಿದು.   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಗೌರಿಬಿದನೂರಿನಿಂದ ಬಿಜೆಪಿ ಪರಿವರ್ತನಾ ಯಾತ್ರೆ ಆರಂಭಗೊಂಡಿದೆ. ಇದಕ್ಕಾಗಿಯೇ ಗಡಿಭಾಗದ ಬಾಗೇಪಲ್ಲಿಯಲ್ಲಿ ಜನರನ್ನು ಸೆಳೆಯಲು ಬಿಜೆಪಿ ಮುಖಂಡ ಅರಿಕೆರೆ ಸಿ.ಕೃಷ್ಣಾರೆಡ್ಡಿ ಅವರು ಸಾರ್ವಜನಿಕ ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸಿದ ವೇದಿಕೆಯಲ್ಲಿ ಬೆಳಿಗ್ಗೆಯಿಂದಲೇ ಆರ್ಕೆಸ್ಟ್ರಾದೊಂದಿಗೆ ಯುವತಿಯರ ನೃತ್ಯ ಆಯೋಜಿಸಿದ್ದಾರೆ.

ಪಟ್ಟಣದ ಎಚ್‌.ಎನ್‌.ವೃತ್ತದಲ್ಲಿ ಹಾಕಿದ ವೇದಿಕೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಆರಂಭಗೊಂಡ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಐದು ಯುವತಿಯರು ಬಗೆಬಗೆಯ ಹಾಡಿಗೆ ಮೈಬಳುಕಿಸಿ ಹೆಜ್ಜೆ ಹಾಕುತ್ತ ಕುಣಿಯುತ್ತಿದ್ದಾರೆ. ವೇದಿಕೆ ಬಳಿ ನೆರೆದಿರುವ ನೂರಾರು ಜನರು ನೃತ್ಯ ನೋಡಿ ಕೇಕೆ, ಶಿಳ್ಳೆ ಹೊಡೆಯುತ್ತಿದ್ದಾರೆ.

</p><p>ಕೆಲ ಯುವಕರು, ಸಾರ್ವಜನಿಕರು ಕೂಡ ಯುವತಿಯರಿಗೆ ಸಾಥ್ ನೀಡಿ ಹೆಜ್ಜೆ ಹಾಕುತ್ತಿರುವ ದೃಶ್ಯಗಳು ಕಂಡುಬಂದವು. ಬಹಿರಂಗ ವೇದಿಕೆಯಲ್ಲಿ ‘ಅಲ್ಲಾಡ್ಸು ಅಲ್ಲಾಡ್ಸು’ ಹಾಡು ಸೇರಿದಂತೆ ಅನೇಕ ಗೀತೆಗಳಿಗೆ ವೇದಿಕೆ ಮೇಲಿದ್ದವರೆಲ್ಲ ತೋರಿದ ಮಾದಕ ಕುಣಿತಕ್ಕೆ ಅನೇಕ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.</p><p>ಪೂರ್ವ ನಿಗದಿಯಂತೆ ಬಾಗೇಪಲ್ಲಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಯಾತ್ರೆ ನಡೆಯಬೇಕಿತ್ತು. ಆದರೆ ಗೌರಿಬಿದನೂರಿನಲ್ಲಿ 11 ಗಂಟೆಗೆ ಆರಂಭವಾಗಬೇಕಾದ ಯಾತ್ರೆ ಸುಮಾರು ಒಂದೂವರೆ ಗಂಟೆ ತಡವಾಗಿ ಆರಂಭಗೊಂಡಿತು. ಅದು ಸಂಜೆ 4ರ ಸುಮಾರಿಗೆ ಬಾಗೇಪಲ್ಲಿ ತಲುಪುವ ನಿರೀಕ್ಷೆ ಇದೆ. ಅಲ್ಲಿಯವರೆಗೂ ಈ ನೃತ್ಯ ನಡೆಯಲಿದೆ ಎನ್ನಲಾಗಿದೆ.</p></p>

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.