ADVERTISEMENT

‘ಅಭಿವೃದ್ಧಿಯ ಹರಿಕಾರ ದೇವರಾಜ ಅರಸು’

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 9:28 IST
Last Updated 22 ಆಗಸ್ಟ್ 2017, 9:28 IST
ಚಿಕ್ಕಮಗಳೂರಿನಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಈ.ಆರ್. ಮಹೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌.ಚೈತ್ರಶ್ರೀ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಎ.ಎನ್. ಮಹೇಶ್, ನಗರಸಭೆ ಅಧ್ಯಕ್ಷೆ ಕವಿತಾ ಶೇಖರ್, ಜಿಲ್ಲಾಧಿಕಾರಿ ಜಿ.ಸತ್ಯವತಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಸ್.ಎನ್.ರಾಮಸ್ವಾಮಿ ಶೆಟ್ಟಿಗದ್ದೆ ಅವರು ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಚಿಕ್ಕಮಗಳೂರಿನಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಈ.ಆರ್. ಮಹೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌.ಚೈತ್ರಶ್ರೀ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಎ.ಎನ್. ಮಹೇಶ್, ನಗರಸಭೆ ಅಧ್ಯಕ್ಷೆ ಕವಿತಾ ಶೇಖರ್, ಜಿಲ್ಲಾಧಿಕಾರಿ ಜಿ.ಸತ್ಯವತಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಸ್.ಎನ್.ರಾಮಸ್ವಾಮಿ ಶೆಟ್ಟಿಗದ್ದೆ ಅವರು ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.   

ಚಿಕ್ಕಮಗಳೂರು: ‘ಡಿ.ದೇವರಾಜ ಅರಸು ಅವರು ರಾಜಕೀಯ ಕ್ಷೇತ್ರದಲ್ಲಿ ಸಂಚಲನ ಮೂಡಿಸಿ ತಳಸಮುದಾಯಗಳ ಏಳಿಗೆಗೆ ಶ್ರಮಿಸಿದರು’ ಎಂದು ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 102ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ‘ಇಂದಿರಾಗಾಂಧಿ ಅವರು ಜಾರಿಗೊಳಿಸಿದ 20 ಅಂಶಗಳ ಕಾರ್ಯಕ್ರಮವನ್ನು ರಾಜ್ಯದಲ್ಲಿ ಯಥವತ್ತಾಗಿ ಅನುಷ್ಟಾನಗೊಳಿಸಿದರು. ಎಂಟು ವರ್ಷ ಉತ್ತಮವಾಗಿ ಆಡಳಿತ ನಡೆಸಿದರು’ ಎಂದು ಬಣ್ಣಿಸಿದರು.

ಭೂಸುಧಾರಣೆ ಕಾಯ್ದೆಯನ್ನು ಜಾರಿಗೊಳಿಸಿ ಉಳುವವನೇ ಭೂಮಿ ಒಡೆಯನನ್ನಾಗಿ ಮಾಡಿದರು. ಸಚಿವರ ಸಂಪುಟದಲ್ಲಿನ ಬಹಳಷ್ಟು ಮಂದಿಯ ವಿರೋಧದ ನಡುವೆಯೂ ಈ ಕಾಯ್ದೆಯನ್ನು ಅನುಷ್ಟಾನಗೊಳಿಸಿದರು. ಜೀತಪದ್ಧತಿ, ಮಲಹೊರುವ ಪದ್ಧತಿಗಳನ್ನು ರದ್ದು ಮಾಡಿದರು. ಸಂವಿಧಾನದ ಆಶಯಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಶ್ರಮಿಸಿದರು ಎಂದರು.

ADVERTISEMENT

‘ಹುದ್ದೆಗಳಲ್ಲಿ ಹಿಂದುಳಿದವರ್ಗದವರಿಗೆ ಮೀಸಲಾಯಿತಿ ಕಲ್ಪಿಸಿದರು. ಹಾಸ್ಟೆಲ್‌ ಸೌಲಭ್ಯ ಕಲ್ಪಿಸಿದರು. ಉತ್ತಮ ಕೆಲಸಗಳನ್ನು ಮಾಡಿ ಜನಮಾನಸದಲ್ಲಿ ಶಾಶ್ವತವಾಗಿ ಉಳಿದರು’ ಎಂದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಸ್.ಎನ್.ರಾಮಸ್ವಾಮಿ ಶೆಟ್ಟಿಗದ್ದೆ ಮಾತನಾಡಿ, ‘ದೇವರಾಜ ಅರಸು ಅವರು ಧೀಮಂತ ರಾಜಕಾರಣಿ ಜನರ ಒಳಿತಿಗಾಗಿ ಅನೇಕ ಸುಧಾರಣೆಗಳನ್ನು ಜಾರಿಗೆಗೊಳಿಸಿದರು’ ಎಂದರು.

ಬಿಜಿಎಸ್ ಅಧ್ಯಯನ ಕೇಂದ್ರದ ಆಡಳಿತಾಧಿಕಾರಿ ಎಸ್.ಡಿ. ಯೋಗರಾಜು ಅವರು ಉಪನ್ಯಾಸ ನೀಡಿದರು. ದೇವರಾಜು ಅರಸು ಜಯಂತ್ಯುತ್ಸವ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಬಿ.ಎಸ್. ಚೈತ್ರಶ್ರೀ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಬೆಳವಾಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕವಿತಾ ಲಿಂಗರಾಜು, ಶೃಂಗೇರಿ ಶಿವಣ್ಣ, ಜಸಂತಾ ಅನಿಲ್ ಕುಮಾರ್, ಬಿ.ಜಿ. ಸೋಮಶೇಖರಪ್ಪ , ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಸಂಗಪ್ಪ, ಜಿಲ್ಲಾ ಅರಸು ಸಂಘದ ಅಧ್ಯಕ್ಷ ಮಧುಕುಮಾರ್, ಮುಖಂಡರಾ ರಾಧಾಕೃಷ್ಣ, ಈಶ್ವರ್, ಲಕ್ಷ್ಮಣರಾಜ್‌, ಜಗದೀಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.