ADVERTISEMENT

ಅರಣ್ಯ, ಕಂದಾಯ ಇಲಾಖೆ ಜಂಟಿ ಸರ್ವೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2017, 8:43 IST
Last Updated 19 ಸೆಪ್ಟೆಂಬರ್ 2017, 8:43 IST

ಚಿಕ್ಕಮಗಳೂರು: ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಲಿಂಗದಹಳ್ಳಿಯ ಸರ್ವೆ ನಂ 187 ಮತ್ತು ಎಸ್‌.ಬಿದರೆ ಗ್ರಾಮದ ಸರ್ವೆ ನಂ 23, 27,192,180ರ ಸರ್ಕಾರಿ ಗೋಮಾಳ ಮತ್ತು ಅರಣ್ಯ ಇಲಾಖೆಯ ಜಾಗವನ್ನು ಅರಣ್ಯ ಮತ್ತು ಕಂದಾಯ ಇಲಾಖೆ ವತಿಯಿಂದ ಜಂಟಿ ಸರ್ವೆ ಮಾಡಿಸಬೇಕು ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.

ಗ್ರಾಮಗಳಲ್ಲಿನ ಈ  ಸರ್ವೆ ನಂಬರುಗಳ ಜಮೀನಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು ರೈತರು ಸಾಗುವಳಿ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಜಾಗವನ್ನು ಅಧಿಕಾರಿಗಳು ಗುರುತಿಸಿ ಪಹಣಿಯಲ್ಲಿ ನಮೂದಿಸುತ್ತಿಲ್ಲ. ಇದರಿಂದ ರೈತರಿಗೆ ಬಗರ್‌ ಹುಕುಂ ಸಾಗುವಳಿ ಪತ್ರ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ನ್ನು ಜಂಟಿ ಸರ್ವೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿ ಈ ಹಿಂದೆಯೇ ತಹಶೀಲ್ದಾರ್ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಆದೇಶ ನೀಡಿದ್ದಾರೆ. ಆದರೂ ಅರಣ್ಯ ಅಧಿಕಾರಿಗಳು ಜಂಟಿ ಸರ್ವೆಗೆ ಗೈರಾಗಿ ಬಗರ್‌್ ಹುಕ್ಕುಂ ಸಾಗುವಳಿದಾರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಸ್ಥರಾದ ಸಂತೋಷ್, ಸಿದ್ದಮ್ಮ, ಶ್ರೀನಿವಾಸ್, ಮಲ್ಲೇಗೌಡ, ರಂಗಶೆಟ್ಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.