ADVERTISEMENT

ಅರಣ್ಯ ಸಿಬ್ಬಂದಿ ಜತೆ ಗ್ರಾಮಸ್ಥರ ಜಟಾಪಟಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2017, 7:22 IST
Last Updated 20 ಸೆಪ್ಟೆಂಬರ್ 2017, 7:22 IST

ಚಿಕ್ಕಮಗಳೂರು: ತಾಲ್ಲೂಕಿನ ಕಳಸಾ ಪುರ ಬಳಿಯ ನಾಗರಹಳ್ಳಿಯ ಗೋಮಾಳ ಜಾಗದಲ್ಲಿ ಮಂಗಳವಾರ ಮಧ್ಯಾಹ್ನ ಬೇಸಾಯಕ್ಕೆ ಮುಂದಾಗಿದ್ದ ಗ್ರಾಮಸ್ಥರು ಅರಣ್ಯ ಸಿಬ್ಬಂದಿಯೊಂದಿಗೆ ಜಟಾಪಟಿ ನಡೆಸಿದ್ದಾರೆ.

ಈ ಜಾಗವು ಅರಣ್ಯ ಇಲಾಖೆಗೆ ಸೇರಿದ್ದು, ಇಲ್ಲಿ ಬೇಸಾಯ ಮಾಡುವಂತಿಲ್ಲ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಗಾದೆ ತೆಗೆದಿದ್ದಾರೆ ಎಂದು ಗ್ರಾಮಸ್ಥರು ದೂಷಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಈ ಜಾಗದಲ್ಲಿ ಬೇಸಾಯಕ್ಕೆ ಮುಂದಾದವರನ್ನು ಅರಣ್ಯ ಸಿಬ್ಬಂದಿ ತಡೆದಿದ್ದಾರೆ. ಆಗ ವಾಗ್ವಾದ ನಡೆದಿದೆ.

ಹಲವಾರು ವರ್ಷಗಳಿಂದ ಈ ಜಾಗದ ವ್ಯಾಜ್ಯ ಇದೆ. ರೈತರು ಮತ್ತು ಅರಣ್ಯ ಇಲಾಖೆಯವರು ಕೋರ್ಟ್‌ನಲ್ಲಿ ಮನವಿ, ಮೇಲ್ಮನವಿ ಸಲ್ಲಿಸಿದ್ದಾರೆ. ಜಾಗದಲ್ಲಿ ಬೇಸಾಯ ಮಾಡಲು ಅಡ್ಡಿಪಡಿಸುತ್ತಿದ್ದಾರೆ ಎಂದು ನಾಗರಹಳ್ಳಿಯ ಕೆಲ ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.