ADVERTISEMENT

‘ಆರೋಗ್ಯವಿದ್ದರೆ ಸ್ವಸ್ಥ ಸಮಾಜ ನಿರ್ಮಾಣ’

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2017, 7:24 IST
Last Updated 25 ಮಾರ್ಚ್ 2017, 7:24 IST

ಚಿಕ್ಕಮಗಳೂರು: ಮನುಷ್ಯ ಉತ್ತಮ ಆರೋಗ್ಯವನ್ನು ಹೊಂದಿದಾಗ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್ ತಿಳಿಸಿದರು.

ಶುಕ್ರವಾರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ರಾಬರ್ಟ್‌ಕಾಕ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕ್ಷಯರೋಗ ಘಟಕದ ವತಿಯಿಂದ ಆಯೋಜಿಸಿದ ವಿಶ್ವ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರು ಕೆಲಸದ ಒತ್ತಡಗಳಿಂದಾಗಿ ಆರೋಗ್ಯವನ್ನು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದಕ್ಕೆ ಆಸ್ಪದ ಕೊಡದೆ ಆರೋಗ್ಯದ ಕಡೆಗೆ ಹೆಚ್ಚು ಒತ್ತು ನೀಡಬೇಕು ಎಂದರು.

ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ಮುನ್ನಚ್ಚರಿಕೆ ವಹಿಸುವುದು ಅಗತ್ಯ. ಕ್ಷಯ ರೋಗವು ಸೂಕ್ಷ್ಮಾಣುಗಳಿಂದ ಒಬ್ಬರಿಂದ ಒಬ್ಬರಿಗೆ ಹರಡುವಂತಹ ರೋಗವಾಗಿದ್ದು, ಈ ರೋಗದ ಲಕ್ಷಣ ಗಳು ಕಂಡುಬಂದಾಗ ಶೀಘ್ರದಲ್ಲಿಯೇ ಚಿಕಿತ್ಸೆ ಪಡೆಯುವುದು ಅಗತ್ಯ.

ಕ್ಷಯ ರೋಗದ ಬಗ್ಗೆ ಗ್ರಾಮೀಣ ಭಾಗದಲ್ಲಿ ಅರಿವಿನ ಕೊರತೆ ಇದೆ. ಹೀಗಾಗಿ, ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಳ್ಳಿಗಳಲ್ಲಿ ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಕುಮಾರ್‌ ನಾಯ್ಕ್ ಮಾತನಾಡಿ, ಹಿಂದೆ ಕ್ಷಯ ರೋಗಕ್ಕೆ ಔಷಧಿ ಕೊರತೆ ಇತ್ತು. ಆದರೆ, ಈ ದಿನಗಳಲ್ಲಿ ಔಷಧಿ ಕೊರತೆ ಇಲ್ಲ. 2 ತಿಂಗಳಿಗಿಂತ ಹೆಚ್ಚು ಸಮಯದ ಕೆಮ್ಮು ಕಾಣಿಸಿಕೊಂಡಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸಿ, ಆರೋಗ್ಯ ಇಲಾಖೆ ವತಿ ಯಿಂದ ಕ್ಷಯ ರೋಗದ ನಿಯಂತ್ರಣಕ್ಕೆ  ಆದ್ಯತೆ ನೀಡಲಾಗುತ್ತಿದೆ ಎಂದರು.

ನಗರದ ತಾಲ್ಲೂಕು ಕಚೇರಿಯಿಂದ ಜಿಲ್ಲಾ ಆಸ್ಪತ್ರೆಯವರೆಗೆ ಕ್ಷಯರೋಗದ ಬಗ್ಗೆ ಜಾಗೃತಿ ಮೂಡಿಸುವ ಜಾಥಾ  ನಡೆಸ ಲಾಯಿತು. ಜಿಲ್ಲಾ ಕ್ಷಯರೋಗ ನಿಯಂತ್ರ ಣಾ ಕೇಂದ್ರ ಅಧಿಕಾರಿ ಡಾ.ಬಾಲಕೃಷ್ಣ, ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ, ತ್ರಿವೇಣಿ ಕಿರಣ್ ಕುಮಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.