ADVERTISEMENT

‘ಕ್ರಿಯಾಶೀಲತೆ ಬೌದ್ಧಿಕ ಬೆಳವಣಿಗೆಗೆ ಸಹಕಾರಿ’

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2017, 5:30 IST
Last Updated 6 ಫೆಬ್ರುವರಿ 2017, 5:30 IST

ಶೃಂಗೇರಿ: ಶಿಕ್ಷಣದ ಜೊತೆ ವಿದ್ಯಾರ್ಥಿ ಗಳು ತಮ್ಮೊಳಗಿರುವ ಸೃಜನಶೀಲತೆಗೆ ಹೆಚ್ಚಿನ ಮಹತ್ವ ನೀಡಬೇಕು. ಶಿಕ್ಷಣ ಉದ್ಯೋಗವನ್ನು ಸೃಷ್ಟಿಸಿದರೆ ಕ್ರಿಯಾ ಶೀಲತೆ ಆತ್ಮವಿಶ್ವಾಸ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿ ಯಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಂಜುನಾಥ್ ತಿಳಿಸಿದರು.

ಶನಿವಾರ ಶೃಂಗೇರಿ ಪಟ್ಟಣದ ಮೆಟ್ರಿಕ್ ನಂತರದ ಹಿಂದುಳಿದ ವರ್ಗ ಗಳ ಬಾಲಕಿಯರ ವಸತಿ ನಿಲಯದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿನಿಯರು ಪ್ರಸ್ತುತ ಆರ್ಥಿಕ ಸ್ವಾವಲಂಬನೆ ಮುಖ್ಯ. ಶಿಕ್ಷಣ ಅವರಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಯನ್ನು ನೀಡುವಲ್ಲಿ ಮಹತ್ತರ ಪಾತ್ರ ವಹಿಸಲಿದ್ದು, ಭವಿಷ್ಯದ ರೂವಾರಿ ಗಳಾದ ವಿದ್ಯಾರ್ಥಿ ಸಮೂಹದವರಿಗೆ ಸಂಸ್ಕೃತಿ, ಸಂಸ್ಕಾರವನ್ನು ಉಳಿಸುವ ಗುರುತರ ಜವಾಬ್ದಾರಿ ಇದೆ ಎಂದರು.

ದೇಶದ ಅಭಿವೃದ್ಧಿಗೆ ಚಿಂತಿಸುವ ಮನೋಭಾವವನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸುಸಂಸ್ಕೃತಭಾವ ಬೆಳೆಸಿಕೊಳ್ಳಬೇಕು.

ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣವನ್ನು ವ್ಯಯಿಸುತ್ತಿದ್ದು, ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳು ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದಿದ್ದರೆ ₹20 ಸಾವಿರ ಮತ್ತು ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ₹25 ಸಾವಿರ ವಿಶೇಷ ಅನುದಾನವನ್ನು ನೀಡುತ್ತಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಾಸ್ಟೆಲ್ ಮೇಲ್ವಿಚಾರಕ ರವೀಂದ್ರ ಮುರೊಳ್ಳಿ ಮಾತನಾಡಿ, ವಾರ್ಷಿ ಕೋತ್ಸವ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಆನಾವರಣಗೊಳಿಸಲು ಇರುವಂತಹ ಸೂಕ್ತವಾದ ವೇದಿಕೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮೊಳಗಿರುವ ಪ್ರತಿಭೆಗ ಳನ್ನು ವೇದಿಕೆಯಲ್ಲಿ ಪ್ರಸ್ತುತ ಪಡಿಸ ಬೇಕು. ಆಗ ಮಾತ್ರ ಅವರಲ್ಲಿ ಮಾನಸಿಕ ದೃಢತೆ ಹಾಗೂ ಬೌದ್ಧಿಕ ಬೆಳವಣಿಗೆ ಸಾಧ್ಯ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮ ನೆರ ವೇರಿತು. ಕಾರ್ಯ ಕ್ರಮದಲ್ಲಿ ಹಾಸ್ಟೆಲ್ ಸಿಬ್ಬಂದಿಗಳಾದ ಪದ್ಮಾವತಿ, ನಾಗರತ್ನ, ಸುಕನ್ಯಾ, ಜಯಶೀಲ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.