ADVERTISEMENT

ಜಿಲ್ಲೆಯಲ್ಲಿ 82 ಡೆಂಗಿ ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 14 ಜುಲೈ 2017, 5:23 IST
Last Updated 14 ಜುಲೈ 2017, 5:23 IST

ಚಿಕ್ಕಮಗಳೂರು: ಡೆಂಗಿ ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ರಾಗಪ್ರಿಯಾ ಅವರು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆಸ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 2,75,000 ಮನೆಗಳಿವೆ. ಆರೋಗ್ಯ ಇಲಾಖೆಯಿಂದ ಎರಡು ಬಾರಿ ನಡೆಸಿದ ಸಮೀಕ್ಷೆಯಲ್ಲಿ 8,402 ಮನೆಗಳಲ್ಲಿ ಹಾಗೂ 10,146 ಸ್ಥಳಗಳಲ್ಲಿ ಲಾರ್ವಾ ಕಂಡುಬಂದಿವೆ. ಮೂರು ತಿಂಗಳಿನಲ್ಲಿ 1,20,155 ಜನರಿಗೆ ಜ್ವರ ಕಾಣಿಸಿದೆ. 279 ಶಂಕಿತ ಡೆಂಗಿ ಪ್ರಕರಣಗಳಲ್ಲಿ 82 ಪ್ರಕರಣಗಳು ಖಾತ್ರಿಯಾಗಿವೆ ಎಂದು ತಿಳಿಸಿದರು.

ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲ್ಲೂಕುಗಳಲ್ಲಿ  ಡೆಂಗಿ ಪ್ರಕರಣ ಹೆಚ್ಚಾಗಿ ಕಂಡುಬಂದಿವೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣ ನಿಟ್ಟಿನಲ್ಲಿ ಸಾರ್ವಜನಿಕರಿಗೆ  ಅರಿವು ಮೂಡಿಸಬೇಕು.

ADVERTISEMENT

ಡೆಂಗಿ ಪ್ರಕರಣಗಳು ಹೆಚ್ಚು ಕಂಡುಬಂದಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ಬಾರಿ ಲಾರ್ವಾ ಸಮೀಕ್ಷೆ ಮಾಡಬೇಕು. ಜನಪ್ರತಿನಿಧಿಗಳು, ಪಿಡಿಒಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಒಗ್ಗೂಡಿ ನೈರ್ಮಲ್ಯ ಸಮಿತಿ ಸಭೆ ನಡೆಸಬೇಕು ಎಂದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ದೊಡ್ಡ ಮಲ್ಲಪ್ಪ, ಆರ್.ಸಿ.ಹೆಚ್.ಅಧಿಕಾರಿ ಡಾ.ಎಸ್‌.ಜಿ. ಕಿರಣ್, ಡಾ.ಬಾಲಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.