ADVERTISEMENT

ದಾವೆಯಿಂದ ಗ್ರಾಮಗಳಲ್ಲಿ ವೈದ್ಯರ ಕೊರತೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2017, 6:47 IST
Last Updated 31 ಜನವರಿ 2017, 6:47 IST

ಮೂಡಿಗೆರೆ:ವೈದ್ಯರ ಸಂಘವು ಹೈಕೋರ್ಟ್‌ನಲ್ಲಿ ದಾವೆ ಹೂಡಿರು ವುದಿಂದ ಗ್ರಾಮೀಣ ಪ್ರದೇಶಕ್ಕೆ ವೈದ್ಯರ ಸೇವೆಯ ಕೊರತೆಯುಂಟಾಗಲು ಕಾರಣ ವಾಗಿದೆ ಎಂದು ಶಾಸಕ ಬಿ.ಬಿ. ನಿಂಗಯ್ಯ ತಿಳಿಸಿದರು.

ಮಹಾತ್ಮಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಸೇವೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡ ತೀರ್ಮಾ ನವನ್ನು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಬೆಂಬಲಿಸಿದ್ದೆವು. ಆದರೆ ರಾಜ್ಯ ವೈದ್ಯರ ಸಂಘವು ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿರು ವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದು, ಅದು ಬಗೆಹರಿಯದ ಕಾರಣ ಗ್ರಾಮೀಣ ಪ್ರದೇಶದ ಆರೋಗ್ಯ ಕೇಂದ್ರಗಳಿಗೆ ವೈದ್ಯರ ಕೊರತೆಯುಂ ಟಾಗಲು ಕಾರಣವಾಗಿದೆ ಎಂದರು.

ಮಹಾತ್ಮಗಾಂಧಿ ಸಾರ್ವಜನಿಕ ಆಸ್ಪತ್ರೆ ಟ್ರಸ್ಟ್‌ ಅಧ್ಯಕ್ಷ ಮಾಜಿ ಸಂಸದ ಡಿ.ಎಂ. ಪುಟ್ಟೇಗೌಡ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಹೆಚ್ಚಾಗಿ ಗ್ರಾಮೀಣ ಪ್ರದೇಶಗಳ ಬಡಜನರೇ ಬರುವವರಾಗಿದ್ದು, ಅಂತಹ ರೋಗಿ ಗಳನ್ನು ಬೇರೆ ಆಸ್ಪತ್ರೆಗೆ ತೆರಳಲು ಸೂಚಿಸಿದಾಗ, ಬಸ್‌ ಚಾರ್ಜ್‌ಗೂ ಹಣವಿಲ್ಲದ ಸ್ಥಿತಿಯಿರುತ್ತದೆ.

ಆಸ್ಪತ್ರೆಯಲ್ಲಿ ವಸತಿಗೃಹ ಕೊರತೆಯಿಂದ ಆಸ್ಪತ್ರೆಗೆ ವೈದ್ಯರು ಆಗಮಿಸುತ್ತಿಲ್ಲ ಎಂಬ ದೂರುಗಳಿದ್ದ ಹಿನ್ನೆಲೆಯಲ್ಲಿ ₹ 2.5 ಕೋಟಿ ವೆಚ್ಚದಲ್ಲಿ ವೈದ್ಯರಿಗಾಗಿ 8 ವಸತಿಗೃಹಗಳನ್ನು ನಿರ್ಮಿಸಲಾಗುತ್ತಿದ್ದು, ₹1.5 ಕೋಟಿ ವೆಚ್ಚದಲ್ಲಿ ಡಯಾಲಿಸಿಸ್‌ ಕೇಂದ್ರ, ವಿಶೇಷವಾರ್ಡ್‌ಗಳ ದುರಸ್ತಿ, ಬಣ್ಣ ಸೇರಿದಂತೆ ಒಟ್ಟು ₹ 4 ಕೋಟಿ ಮೊತ್ತದಲ್ಲಿ ಹಲವು ಕಾಮಗಾರಿಗಳನ್ನು ನಡೆಸಲಾಗುವುದು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಸ್ತುವಾರಿ ವಹಿಸಿ ಗುಣಮಟ್ಟದ ಕಟ್ಟಡವನ್ನು ಶೀಘ್ರವಾಗಿ ನಿರ್ಮಿಸಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಎಂ.ಕೆ. ಪ್ರಾಣೇಶ್ ಮಾತನಾಡಿ, ಇಲ್ಲಿನ ಆಸ್ಪತ್ರೆ ಯಲ್ಲಿನ ವೈದ್ಯರ ಕೊರತೆಯ ಬಗ್ಗೆ ವಿಧಾನ ಮಂಡಲದಲ್ಲಿ ವೈದ್ಯರನ್ನು ನಿಯೋಜಿಸುವಂತೆ ಒತ್ತಾಯಿಸ ಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವೆ ಡಿ.ಕೆ.ತಾರಾದೇವಿ ಸಿದ್ಧಾರ್ಥ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಸಿ. ರತನ್‌, ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಣಕಲ್‌ ಶ್ಯಾಮಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಮಿಜಾಬಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ಕುಮಾರ್‌, ಹಳೆಸೆ ಶಿವಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಸುಧಾಯೋಗೇಶ್, ಎಂಜಿಎಂ ಟ್ರಸ್ಟ್‌ ಕಾರ್ಯದರ್ಶಿ ಕೆ.ಎಚ್‌. ವೆಂಕಟೇಶ್‌, ಹಳೇಕೋಟೆ ರಮೇಶ್‌,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.