ADVERTISEMENT

‘ಬಜೆಟ್‌ ವಿರೋಧಿಸಿ ಇಂದು ಹೋರಾಟ’

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2017, 5:28 IST
Last Updated 6 ಫೆಬ್ರುವರಿ 2017, 5:28 IST

ಚಿಕ್ಕಮಗಳೂರು: ‘ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಅಂಗನ ವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ನಿರ್ಲಕ್ಷಿಸಲಾಗಿದೆ. ಸರ್ಕಾರದ ಇಂತಹ ನೀತಿ ಖಂಡಿಸಿ ಇದೇ ಇಂದು ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾ ಗುವುದು’ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್  ಜಿಲ್ಲಾ ಅಧ್ಯಕ್ಷೆ ರಾಧಾ ಸುಂದ ರೇಶ್ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾ  ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಮಂಡಿಸಿ ರುವ ಪ್ರಸಕ್ತ ಸಾಲಿನ ಬಜೆಟ್‌ ಬಂಡವಾಳ    ಶಾಹಿಗಳ ಪರ ವಾಗಿದೆ. ಭಾಷಣ ದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತ ನಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಂಗನ ವಾಡಿ ಕಾರ್ಯ ಕರ್ತೆಯರು ಹಾಗೂ ಸಹಾಯ ಕಿಯರ ಕಲ್ಯಾಣಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ ಎಂದು ದೂರಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹3 ಸಾವಿರ ಮತ್ತು ಸಹಾಯಕಿಯರಿಗೆ ₹3 ಸಾವಿರ ಗೌರವಧನ ನೀಡುತ್ತಿವೆ. ಮಕ್ಕಳ ನಿರ್ವಹಣೆಯೊಂದಿಗೆ ಸರ್ಕಾರಗಳು 40 ಯೋಜನೆಗಳನ್ನು ಅನುಷ್ಠಾನ ಮಾಡಬೇಕು. ಶ್ರಮ ದುಡಿಮೆ ಬೇಡುವ ಸರ್ಕಾರಗಳು ಮಾತ್ರ ಏಕೆ ವೇತನ ಹೆಚ್ಚಳಕ್ಕೆ ಮುಂದಾಗಿಲ್ಲ? ಎಂದು ಪ್ರಶ್ನಿಸಿದರು.

ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಬಿ.ಅಮ್ಜದ್ ಮಾತನಾಡಿ, ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ಮತ್ತು ಮಹಿಳಾ ಸಮುದಾಯ ನಿರ್ಲಕ್ಷಿಸಿದ್ದಾರೆ. ಜನರ ವಾಸ್ತವ ಸಮಸ್ಯೆಗಳನ್ನು ಮರೆಮಾಚಲಾಗಿದೆ. ಬಜೆಟ್‌ನಲ್ಲಿ ಖಾಸಗಿ ಸಂಸ್ಥೆಗಳಿಗೆ ಅನುಕೂಲ ಮಾಡಲಾಗಿದೆ ಎಂದು ಆರೋಪಿಸಿದರು. ತಾಲ್ಲೂಕು ಕಾರ್ಯದರ್ಶಿ ಜಯಶೇಖರ್, ರಾಜ್ಯ ಉಪಾಧ್ಯಕ್ಷೆ ಎಸ್.ಮಂಗಳಾ, ಮಹಿಳಾ ಸಂಘದ ಶಾರದಮ್ಮ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.