ADVERTISEMENT

ಬಿರುಸುಗೊಂಡ ಗ್ರಾಮ ಪಂಚಾಯಿತಿ ಚುನಾವಣೆ

ನಾಮಪತ್ರ ಸಲ್ಲಿಕೆಗೆ ಇಂದು ಕಡೆಯ ದಿನ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2017, 6:37 IST
Last Updated 2 ಫೆಬ್ರುವರಿ 2017, 6:37 IST
ಬಿರುಸುಗೊಂಡ ಗ್ರಾಮ ಪಂಚಾಯಿತಿ ಚುನಾವಣೆ
ಬಿರುಸುಗೊಂಡ ಗ್ರಾಮ ಪಂಚಾಯಿತಿ ಚುನಾವಣೆ   

ಮೂಡಿಗೆರೆ: ತಾಲ್ಲೂಕಿನ ಬಣಕಲ್‌, ತರುವೆ ಗ್ರಾಮ ಪಂಚಾಯಿತಿ ಚುನಾವಣೆ ಬಿರುಸುಗೊಂಡಿದ್ದು, ಚುನಾವಣೆ ನಡೆ ಯಲಿರುವ 20 ಸ್ಥಾನಗಳಿಗೆ ಬುಧವಾರ 27 ನಾಮಪತ್ರಗಳು ಸಲ್ಲಿಕೆಯಾಗಿವೆ.

ಅವಧಿ ಮುಗಿದಿರುವ ಬಣಕಲ್‌ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 15 ಸ್ಥಾನಗಳು ಹಾಗೂ ತರುವೆ ಗ್ರಾಮ ಪಂಚಾಯಿತಿಯಲ್ಲಿ 5 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದ್ದು, ತರುವೆ ಗ್ರಾಮ ಪಂಚಾಯಿತಿಯಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಿರುವ ಬಿನ್ನಡಿ ಕ್ಷೇತ್ರದಿಂದ 2 ಹಾಗೂ ತರುವೆ ಕ್ಷೇತ್ರಕ್ಕೆ 4 ನಾಮಪತ್ರಗಳು ಸಲ್ಲಿಕೆಯಾಗಿವೆ. ಬಣ ಕಲ್ ಗ್ರಾಮ ಪಂಚಾಯಿತಿಯ 15 ಸ್ಥಾನಗಳಿಗೆ ಹೆಗ್ಗುಡ್ಲು ಕ್ಷೇತ್ರದಿಂದ 5, ಕೂಡಳ್ಳಿ ಕ್ಷೇತ್ರದಿಂದ 4 ಹಾಗೂ ಬಣ ಕಲ್‌ ಕ್ಷೇತ್ರದಿಂದ 6 ನಾಮಪತ್ರಗಳು ಸಲ್ಲಿಕೆಯಾಗಿದೆ.

ಗ್ರಾಮ ಪಂಚಾಯಿತಿ ಚುನಾವಣೆ ಯು ಪಕ್ಷ ರಹಿತ ಚುನಾವಣೆಯಾ ಗಿದ್ದರೂ, ಅಭ್ಯರ್ಥಿಗಳು ಆಯಾ ಪಕ್ಷಗಳ ಬೆಂಬಲಿಗರೊಂದಿಗೆ ಗ್ರಾಮ ಪಂಚಾ ಯಿತಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಪರೋಕ್ಷವಾಗಿ ತಂತ್ರ ಹೆಣೆಯುತ್ತಿವೆ.

ತಾಲ್ಲೂಕಿನ ಗೋಣಿಬೀಡು ಗ್ರಾಮ ಪಂಚಾಯಿತಿಯಲ್ಲಿ ಕಳೆದ ಚುನಾವ ಣೆಯಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿ ಗಾಗಿ ಒತ್ತಾಯಿಸಿ ಚುನಾವಣೆ ಬಹಿಷ್ಕರಿಸಿದ್ದ ಜಿ. ಹೊಸಳ್ಳಿ ಹಾಗೂ ಹಿರಶಿಗರ ಕ್ಷೇತ್ರಗಳಿಗೂ ಚುನಾವಣೆ ಘೋಷಣೆಯಾಗಿದ್ದರೂ, ಬುಧವಾರ ದವರೆಗೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಹಿರಿಶಿಗರ ಹಾಗೂ ಜಿ. ಹೊಸಳ್ಳಿ ಗ್ರಾಮಸ್ಥರು ಈ ಬಾರಿಯೂ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವ ಇಂಗಿತ ವ್ಯಕ್ತಪಡಿಸಿದ್ದು, ಕೊನೆ ಗಳಿಗೆಯಲ್ಲಿ ಗ್ರಾಮಸ್ಥರಲ್ಲದೇ ನೆರೆಹೊರೆಯ ಗ್ರಾಮಗಳ ಮತದಾರರು ಯಾರಾದರೂ ನಾಮಪತ್ರ ಸಲ್ಲಿಸಿದರೆ, ಗ್ರಾಮದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚುನಾವಣೆ ನಡೆಸಲೂ ಗ್ರಾಮದಲ್ಲಿ ಚರ್ಚೆ ನಡೆದಿದೆ. ಗುರುವಾರ ನಾಮಪತ್ರ ಸಲ್ಲಿಕೆಯ ಕಡೆ ಗಳಿಗೆವರೆಗೂ ಕಾದು ನೋಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, ಮಧ್ಯಾಹ್ನ 3 ರವರೆಗೂ ನಾಮಪತ್ರ ಸಲ್ಲಿಸಲು ಅವಕಾ ಶವಿದೆ. ಇದೇ 3 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು 6 ಕಡೆಯ ದಿನವಾಗಿದೆ. 12 ರಂದು ಚುನಾವಣೆ ನಡೆಯಲಿದ್ದು, 15 ರಂದು ತಾಲ್ಲೂಕು ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದೆ ಎಂದು ತಾಲ್ಲೂಕು ಚುನಾವಣಾ ಶಾಖೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.