ADVERTISEMENT

‘ಮತದಾರರು ವಿರೋಧಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ’

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 6:51 IST
Last Updated 21 ಏಪ್ರಿಲ್ 2018, 6:51 IST

ಮೂಡಿಗೆರೆ: ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಬಂದು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಪದಾಧಿಕಾರಿಗಳಾದ ಹಳಸೆ ಶಿವಣ್ಣ, ವಿ.ಕೆ.ಶಿವೇಗೌಡ, ಅರೆಕೂಡಿಗೆ ಶಿವಣ್ಣ, ಅರಸು ಅವರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.
ಟಿಕೆಟ್‌ ಹಂಚಿಕೆ ಸಂಬಂಧಿಸಿದಂತೆ ಯಾವುದೇ ಗೊಂದಲವಿಲ್ಲ. ಇಂದು ಉತ್ತಮ ದಿನವೆಂಬ ಕಾರಣಕ್ಕಾಗಿ ನಾಮಪತ್ರ ಸಲ್ಲಿಸಿದ್ದು, ಇದೇ 23ರ ಸೋಮವಾರದಂದು ಪಕ್ಷದ ಕಾರ್ಯಕರ್ತರೊಂದಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದ  ಪದಾಧಿಕಾರಿಗಳು ಮಾಹಿತಿ ನೀಡಿದರು.ನಾಮಪತ್ರ ಸಲ್ಲಿಕೆಯ ನಂತರ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ,

ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಈ ಬಾರಿ ಬಿಜೆಪಿಯ ಗೆಲುವು ನಿಶ್ಚಿತವಾಗಿದ್ದು, ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸುವ ವಿಶ್ವಾಸವಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಬೆಂಬಲವಿದ್ದು, ಗೆಲುವಿನ ಅಲೆಯನ್ನು ಸಹಿಸಿಕೊಳ್ಳದ ವಿರೋಧ ಪಕ್ಷಗಳು ಸುಳ್ಳು ಸುದ್ದಿ ಹರಡುತ್ತಿವೆ. ಅವರಿಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ADVERTISEMENT

ನಾಮಪತ್ರ ಸಲ್ಲಿಸುವಾಗ ಹಳಸೆ ಶಿವಣ್ಣ, ವಿ.ಕೆ. ಶಿವೇಗೌಡ, ಅರೆಕೂಡಿಗೆ ಶಿವಣ್ಣ, ಅರಸು ಕಚೇರಿಯೊಳಗೆ ಇದ್ದರೆ, ಪಕ್ಷದ ತಾಲ್ಲೂಕು ಅಧ್ಯಕ್ಷ ಪ್ರಮೋದ್‌ ದುಂಡುಗ, ವಕ್ತಾರ ನಯನಾತಳವಾರ ಹಾಗೂ ಪದಾಧಿಕಾರಿಗಳು ಕಚೇರಿ ಆವರಣದ ಬಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.