ADVERTISEMENT

ರೈತರು ಸೋಲನ್ನು ಸವಾಲಾಗಿ ಸ್ವೀಕರಿಸಿ

ರೈತರ ಸಾಂತ್ವನಕ್ಕೆ ಸಂಚಾರಿ ವಾಹನ: ಜಿಲ್ಲಾಧಿಕಾರಿ ಎಸ್.ಪಿ.ಷಡಾಕ್ಷರಿ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2015, 9:23 IST
Last Updated 4 ಆಗಸ್ಟ್ 2015, 9:23 IST

ಚಿಕ್ಕಮಗಳೂರು: ರೈತರು ಆತ್ಮಸ್ಥೈರ್ಯ ಮೈಗೂಡಿಸಿಕೊಂಡಾಗ ಮಾತ್ರ, ಸಾಧನೆ ಮಾಡಲು ಸಾಧ್ಯ ಎಂದು  ಜಿಲ್ಲಾಧಿಕಾರಿ ಎಸ್.ಪಿ.ಷಡಾಕ್ಷರಿ ಸಲಹೆ ನೀಡಿದರು.

ನಗರದ ವಾರ್ತಾಭವನದ ಆವರಣ ದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಡೆ ಯುವ, ರೈತರಿಗೆ ಸಾಂತ್ವನ ಹೇಳುವ ಕಾರ್ಯಕ್ರಮದ ಸಂಚಾರಿ ಘಟಕ ವಾಹನಕ್ಕೆ ಸೋಮವಾರ ಹಸಿರು ನಿಶಾನೆ ತೋರಿಸಿ ಮಾತನಾಡಿ, ಆತ್ಮಸ್ಥೈರ್ಯ ಹೊಂದಿರುವ ವ್ಯಕ್ತಿ ಸೋಲಿಗೆ ಹೆದರು ವುದಿಲ್ಲ, ಸೋಲುಗಳನ್ನು ಸವಾಲಾಗಿ ಸ್ವೀಕರಿಸಿ, ಮುನ್ನಡೆಯುತ್ತಾನೆ ಎಂದರು.

ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಅನೇಕ ಯೋಜನೆಗಳನ್ನು ರೂಪಿಸಿದೆ. ಇದರ ಲಾಭವನ್ನು ಪಡೆದುಕೊಳ್ಳಬೇಕು. ಆರೋಗ್ಯ ಸಮಸ್ಯೆ ಉಂಟಾದಾಗ, ಉಚಿತ ಚಿಕಿತ್ಸೆ ಪಡೆಯಲು ಯಶಸ್ವಿನಿ, ರಾಷ್ಟ್ರೀಯ ಸ್ವಾಸ್ಥ ಭಿಮಾ ಯೋಜನೆ ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಪಶು ಸಂಗೋಪನೆ ವೃತ್ತಿ ಕೈಗೆತ್ತಿ ಕೊಳ್ಳುವುದರಿಂದ ಆರ್ಥಿಕವಾಗಿ ಸಬಲ ರಾಗಲು ಸಾಧ್ಯ, ರೈತರು  ಕೃಷಿ ಚಟುವಟಿಕೆಗಳೊಂದಿಗೆ ಪಶು ಸಂಗೋ ಪನೆ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್. ರಾಗಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಹೆಚ್ಚುವರಿ ಎಸ್ಪಿ ಸಂಜೀವ್ ಎಂ. ಪಾಟೀಲ್, ಕೃಷಿ ಇಲಾಖೆ ಉಪ ನಿರ್ದೇಶಕ ಕೆ.ಆರ್.ಲೋಕೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಸಹಾಯಕ ವಾರ್ತಾಧಿಕಾರಿ ಬಿ.ಮಂಜುನಾಥ ಇದ್ದರು.
*
ಜೀವನದಲ್ಲಿ ಕಷ್ಟ, ಸುಖ ಸಾಮಾನ್ಯ. ಬೆಳೆ ನಾಶವಾದಾಗ  ರೈತರು ಹೆದರದೆ, ಸಮಸ್ಯೆಯನ್ನು ಧೈರ್ಯದಿಂದ ಎದುರಿಸುವ ಛಲ ಬೆಳೆಸಿಕೊಳ್ಳಬೇಕು.
-ಎಸ್.ಪಿ.ಷಡಾಕ್ಷರಿ,
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.