ADVERTISEMENT

ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ 20ರಂದು ದೆಹಲಿ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2017, 6:59 IST
Last Updated 15 ನವೆಂಬರ್ 2017, 6:59 IST

ಚಿಕ್ಕಮಗಳೂರು: 175ಕ್ಕೂ ಹೆಚ್ಚು ರೈತ ಸಂಘಟನೆಗಳ ಮಹಾಒಕ್ಕೂಟ ಹಾಗೂ ಅಖಿಲ ಭಾರತ ರೈತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಇದೇ 20 ರಂದು ದೆಹಲಿ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಿಂದ 500 ರೈತರು ಭಾಗವಹಿಸಲಿದ್ದಾರೆ.

ದೇಶದ ಎಲ್ಲಾ ರೈತರು ಸಾಲ ಮುಕ್ತರಾಗಬೇಕು, ರಾಷ್ಟ್ರೀಯ ರೈತ ಅಯೋಗ ವರದಿಯನ್ನು ಜಾರಿಗೊಳಿಸಬೇಕು. ಬೆಳೆಗೆ ಸರಿಯಾದ ಬೆಲೆ, ಉತ್ತಮ ಮಾರುಕಟ್ಟೆ ವ್ಯವಸ್ಥೆ, ದಲ್ಲಾಳಿ ರಹಿತ ವ್ಯವಸ್ಥೆ, ಬಹುರಾಷ್ಟ್ರೀಯ ಕಂಪನಿಗಳ ಹಿಡಿತದಿಂದ ರೈತರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗುವುದು.

ಕರ್ನಾಟಕದ ಶೇ 21 ರಷ್ಟು ರೈತರು ಸಹಕಾರಿ ಬ್ಯಾಂಕುಗಳಲ್ಲಿ ಸುಮಾರು 10 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಶೇ 79ರಷ್ಟು ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸುಮಾರು 36 ಸಾವಿರ ಕೋಟಿ ಸಾಲ ಪಡೆದಿದ್ದಾರೆ. ರೈತರ ಸಂಪೂರ್ಣ ಸಾಲಮನ್ನಾ ಮಾಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕು ಎಂದು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಿ.ಆರ್.ದುರ್ಗಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.