ADVERTISEMENT

ವಿದ್ಯುತ್‌ಗಾಗಿ ಮೆಸ್ಕಾಂಗೆ ಗ್ರಾಮಸ್ಥರ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2017, 6:45 IST
Last Updated 25 ಏಪ್ರಿಲ್ 2017, 6:45 IST
ಚಿಕ್ಕಮಗಳೂರು ತಾಲ್ಲೂಕಿನ ಕರ್ತಿಕೆರೆ, ಮುಗುಳುವಳ್ಳಿ, ಅಂಬಳೆ, ಕುರುವಂಗಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ನಗರದ ಮೆಸ್ಕಾಂ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರು ತಾಲ್ಲೂಕಿನ ಕರ್ತಿಕೆರೆ, ಮುಗುಳುವಳ್ಳಿ, ಅಂಬಳೆ, ಕುರುವಂಗಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ನಗರದ ಮೆಸ್ಕಾಂ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.   

ಚಿಕ್ಕಮಗಳೂರು: ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾ ಯಿಸಿ ತಾಲ್ಲೂಕಿನ ಕರ್ತಿಕೆರೆ, ಮುಗುಳು ವಳ್ಳಿ, ಅಂಬಳೆ, ಕುರುವಂಗಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ನಗರದ ಮೆಸ್ಕಾಂ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ಮೆಸ್ಕಾಂ ಕಚೇರಿ ಆವರಣದಲ್ಲಿ ಜಮಾಯಿಸಿದ ಗ್ರಾಮಸ್ಥರು ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಒಂದು ತಿಂಗಳಿನಿಂದ ತಮ್ಮ ಗ್ರಾಮಗಳಿಗೆ ವಿದ್ಯುತ್ ಪೂರೈಕೆಯಾಗದೆ ಹಳ್ಳಿಗಳು ಕತ್ತಲ ಕೂಪದಂತಾಗಿದ್ದು, ಪರೀಕ್ಷೆ ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳು ಓದಲು ಪರದಾಡು ವಂತಾಗಿದೆ ಎಂದು ಆರೋಪಿಸಿದರು.

ADVERTISEMENT

ಹಗಲು ವೇಳೆ ವಿದ್ಯುತ್‌ ಸಂಪರ್ಕ ತೆಗೆದರೆ ತೊಂದರೆ ಇಲ್ಲ. ಆದರೆ, ರಾತ್ರಿ ವೇಳೆಯೂ ವಿದ್ಯುತ್ ಸೌಲಭ್ಯ ಇಲ್ಲದಿದ್ದರೆ ಹೇಗೆ? ಎಂದು ಪ್ರಶ್ನಿಸಿದ ಗ್ರಾಮಸ್ಥರು ವಿದ್ಯುತ್ ನೀಡದೆ, ಕುಡಿಯುವ ನೀರೂ ಇಲ್ಲದಂತಾಗಿದೆ. ಗ್ರಾಮೀಣ ಭಾಗದ ಜನರು ಬದುಕುವುದು ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್ ನೀಡಲು ಸಾಧ್ಯವಾಗ ದಿದ್ದಲ್ಲಿ ರಾಜೀನಾಮೆ ನೀಡಿ ಮನೆಗೆ ತೆರಳುವಂತೆ ಅಧಿಕಾರಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಬಂದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್‌ ವಿಜಯ್ ಕುಮಾರ್ ಅವರನ್ನು ರೈತರು ಸುತ್ತುವರೆದು ತೀವ್ರ ತರಾಟೆಗೆ ತೆಗೆದು ಕೊಂಡರು. ಮಲತಾಯಿ ಧೋರಣೆ ಬಿಟ್ಟು ತಮ್ಮ ಗ್ರಾಮಗಳಿಗೆ ವಿದ್ಯುತ್ ನೀಡುವಂತೆ ಆಗ್ರಹಿಸಿದರು.

ಕಾರ್ಯಪಾಲಕ ಎಂಜಿನಿಯರ್‌ ವಿಜಯ್ ಕುಮಾರ್ ‘ಬೇಲೂರಿನ ಫೀಡರ್‌ಗೆ ಚಿಕ್ಕಮಗಳೂರಿನಿಂದ ವಿದ್ಯುತ್ ಸಂಪರ್ಕ ನೀಡಿರುವುದರಿಂದ ಓವರ್ ಲೋಡ್ ಉಂಟಾಗಿದೆ. ಇದ ರಿಂದ ಆಗಾಗ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಸದ್ಯದಲ್ಲೇ ಸಮಸ್ಯೆ ಸರಿಪಡಿಸುವುದಾಗಿ ತಿಳಿಸಿದರು. ಇದಕ್ಕೆ ಒಪ್ಪದ ಗ್ರಾಮಸ್ಥರು ತಮ್ಮ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ನೀಡದಿದ್ದರೆ ಸ್ಥಳದಿಂದ ಕದಲುವುದಿಲ್ಲ’ ಎಂದು ಪಟ್ಟುಹಿಡಿದರು.

ಬೇಲೂರಿಗೆ ಪೂರೈಸುವ ವಿದ್ಯುತ್ ಸ್ಥಗಿತಗೊಳಿಸಿ, ವಿದ್ಯುತ್ ಒದಗಿಸು ವುದಾಗಿ ಮೆಸ್ಕಾಂ ಎಂಜಿನಿಯರ್‌ಗಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ಕೈ ಬಿಟ್ಟರು.

ಕರ್ತಿಕೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯೋಗೀಶ್‌, ಗ್ರಾಮಗಳ ಮುಖಂಡರಾದ ಗುರುಮೂರ್ತಿ, ಸ್ವಾಮಿ, ಜಗದೀಶ್, ಮರಿಶೆಟ್ಟಿ, ಎಪಿ ಎಂಸಿ ಮಾಜಿ ಅಧ್ಯಕ್ಷ ವೆಂಕಟೇಶ್, ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಮನೋಜ್ ಶೆಟ್ಟಿ, ಉಪಾಧ್ಯಕ್ಷ ಕುಮಾರ್ ಆರ್.ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಂಚಾಕ್ಷರಿ, ಅಶೋಕ್, ಭರತ್, ಶರತ್  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.