ADVERTISEMENT

‘ಸರ್ಕಾರಿ ಶಾಲೆ; ಕೀಳರಿಮೆ ಬೇಡ’

​ಪ್ರಜಾವಾಣಿ ವಾರ್ತೆ
Published 18 ಜುಲೈ 2017, 8:31 IST
Last Updated 18 ಜುಲೈ 2017, 8:31 IST

ಮೂಡಿಗೆರೆ: ಸಕಲ ಸವಲತ್ತುಗಳನ್ನು ನೀಡುತ್ತಿರುವ ಸರ್ಕಾರಿ ಶಾಲೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕೀಳರಿಮೆ ಬೇಡ ಎಂದು ಬಿ. ಹೊಸಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿಗೌಡ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಹಳೇಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ವತಿಯಿಂದ ನೀಡಲಾದ ಶೂಗಳನ್ನು ಸೋಮವಾರ ವಿತರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರಿದ್ದು, ಸ್ಪರ್ಧಾತ್ಮಕ ತೆಗೆ ಅನುಗುಣವಾದ ಶಿಕ್ಷಣ ಸಿಗಲಿದೆ. ಜತೆಗೆ ಮಧ್ಯಾಹ್ನದ ಬಿಸಿಯೂಟ, ಹಾಲು ವಿತರಣೆ, ಪಠ್ಯಪುಸ್ತಕ, ಬಟ್ಟೆ ಸೇರಿದಂತೆ ಕಲಿಕೆಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಉಚಿತವಾಗಿ ನೀಡುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದರು.

ಸೇವಾಭಾರತಿ ಸಮಾಜ ಸೇವಾ ಸಂಘದ ಸದಸ್ಯ ರಮೇಶ್‌ ಮಾತನಾಡಿ, ‘ಸರ್ಕಾರಿ ಶಾಲೆಗಳ ಉಳಿವಿಗೆ ಗ್ರಾಮದ ಜನರ ಸಹಕಾರ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಿದರೆ, ಮಾದರಿ ಶಾಲೆಯನ್ನು ನಿರ್ಮಿಸಬಹುದು ’ ಎಂದರು. ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ ಪೂರ್ಣೇಶ್‌ ಮತ್ತಾವರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಧನ್ಯಕುಮಾರ್‌, ಸದಸ್ಯ ಚಂದ್ರು, ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ಶಿಕ್ಷಕರಾದ ಸವಿತಾ, ಆಶಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.