ADVERTISEMENT

‘₹14 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ’

​ಪ್ರಜಾವಾಣಿ ವಾರ್ತೆ
Published 18 ಜನವರಿ 2017, 5:51 IST
Last Updated 18 ಜನವರಿ 2017, 5:51 IST
‘₹14 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ’
‘₹14 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ’   

ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರದಲ್ಲಿ ಪ್ರಸಕ್ತ ಸಾಲಿನಲ್ಲಿ ₹14 ಕೋಟಿ ಅನು ದಾನ ವಿನಿಯೋಗಿಸಿ ಕಾಲೊನಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಬಿ.ಬಿ.ನಿಂಗಯ್ಯ ತಿಳಿಸಿದರು.

ತಾಲ್ಲೂಕಿನ ಬಾಚಿನಗನಹಳ್ಳಿ ಮತ್ತು ಮಾರಿಕಟ್ಟೆ ಕಾಲೊನಿಗಳಲ್ಲಿ ₹12 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಕಾಂಕ್ರಿಟ್‌ ರಸ್ತೆ ಕಾಮಗಾರಿಗೆ ಮಂಗಳ ವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಎಸ್‌ಇಪಿ ಹಾಗೂ ಟಿಎಸ್‌ಪಿ ಯೋಜ ನೆಯಡಿ ಕ್ಷೇತ್ರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳನ್ನು ₹14ಕೋಟಿ ವ್ಯಚ್ಚದಲ್ಲಿ ಅಭಿವೃದ್ಧಿಪಡಿಸ ಲಾಗುತ್ತಿದೆ. ಕೆಲವು ಕಾಮಗಾರಿ ಪ್ರಗತಿಯಲ್ಲಿದೆ. 4 ಹೋಬಳಿ ಕೇಂದ್ರಕ್ಕೂ ಸಮುದಾಯ ಭವನ ನಿರ್ಮಾಣಕ್ಕೆ ತಲಾ ₹50 ಲಕ್ಷ ಮಂಜೂರಾಗಿದೆ. ಆವತಿಯಲ್ಲಿ ಮಾತ್ರ ಭವನ ನಿರ್ಮಾಣಕ್ಕೆ ಜಾಗ ಲಭ್ಯವಿದೆ.

ಉಳಿದಂತೆ ಅಂಬಳೆ, ವಸ್ತಾರೆ ಮತ್ತು ಆಲ್ದೂರಿನಲ್ಲಿ ಜಾಗದ ಅಗತ್ಯವಿದೆ. ಈ ಸಂಬಂಧ ಕೆಡಿಪಿ ಸಭೆಯಲ್ಲಿ ಚರ್ಚೆಯಾಗಿದೆ. ಈ ವಾರದಲ್ಲಿ ವಿಶೇಷ ಸಭೆ ಕರೆದು ಸ್ಥಳ ಮಂಜೂರಾತಿಗೆ ಕ್ರಮ ಕೈಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ಪಂಚಾಯಿತಿ ವ್ಯಾಪ್ತಿಯಲ್ಲೂ ಸಮುದಾಯ ಭವನ ನಿರ್ಮಾಣಕ್ಕೆ ₹12 ಲಕ್ಷ ವೆಚ್ಚದ 12 ಕಾಮಗಾರಿಗೆ ₹1.44 ಕೋಟಿ ಅನುದಾನ, ತಾಲ್ಲೂಕು ಮಟ್ಟದ ಭವನ ನಿರ್ಮಾಣಕ್ಕೆ ₹1.5 ಕೋಟಿ ಅನುದಾನ ಮಂಜೂರಾಗಿದೆ. ಊರಿ ನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುವ ಸಂದರ್ಭ ಸ್ಥಳೀಯರು ನಿತ್ಯ ಗಮನ ಹರಿಸಬೇಕು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ರಾದ ಡಿ.ಜೆ.ಸುರೇಶ್, ಮಹೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ, ಉಪಾಧ್ಯಕ್ಷೆ ಜ್ಯೋತಿ ಮುಖಂಡರಾದ ಪದ್ಮಯ್ಯ, ಯೋಗೀಶ್, ಡಿ.ಎಂ.ಸುರೇಶ್, ನಾಗರಾಜು ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

*
ಸರ್ಕಾರದ ಹಣವೆಂದರೆ ಸಾರ್ವಜನಿಕರ ತೆರಿಗೆ ಹಣ ಅದು, ವ್ಯಯವಾಗದಂತೆ ಎಚ್ಚರ ವಹಿಸಲು ಅಭಿವೃದ್ಧಿ ಕಾಮಗಾರಿಯಲ್ಲಿ ಕಳಪೆಯಾಗದಂತೆ ಗಮನಿಸಬೇಕು.
-ಬಿ.ಬಿ.ನಿಂಗಯ್ಯ,
ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT