ADVERTISEMENT

ಅಭಿವೃದ್ಧಿಯಲ್ಲಿ ಬ್ಯಾಂಕ್‌ಗಳ ಪಾತ್ರ ಮಹತ್ವದ್ದು

​ಪ್ರಜಾವಾಣಿ ವಾರ್ತೆ
Published 17 ಜೂನ್ 2017, 10:50 IST
Last Updated 17 ಜೂನ್ 2017, 10:50 IST

ಚಿತ್ರದುರ್ಗ: ಕೃಷಿ, ಕೈಗಾರಿಕೆ, ಉತ್ಪಾದನೆ, ವ್ಯಾಪಾರದಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ. ಈ ದೃಷ್ಟಿಯಿಂದಾಗಿ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದು ಎಸ್‌ಬಿಐ ಬ್ಯಾಂಕಿನ ಡಿಜಿಎಂ ಮಧುಸೂದನರೆಡ್ಡಿ ಹೇಳಿದರು.

ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಆರಂಭವಾದ ಮೂರು ದಿನಗಳು ನಡೆಯಲಿರುವ ಮೇಕಿಂಗ್ ಆಫ್ ಡೆವಲಪ್ಡ್‌ ಇಂಡಿಯಾ ‘ಮೋದಿ ಫೆಸ್ಟ್’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲೇ ಎಸ್‌ಬಿಐ ಬಹುದೊಡ್ಡ ಬ್ಯಾಂಕ್‌ ಆಗಿ ಹೊರಹೊಮ್ಮಿದ್ದು, ಅಭಿವೃದ್ಧಿಗಾಗಿ ಸಾಲ ನೀಡಲು ಸಿದ್ಧವಿದೆ. ಇದನ್ನು ಸದುಪಯೋಗಪಡಿಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು. ‘ಕೇಂದ್ರ ಸರ್ಕಾರದ ಮಹಾತ್ವಾ ಕಾಂಕ್ಷಿ ಯೋಜನೆಗಳ ಮಾಹಿತಿ ನೀಡುವ ಮೋದಿ ಫೆಸ್ಟ್ ಅನ್ನು ಎಸ್‌ಬಿಐ ಸೇರಿದಂತೆ ವಿವಿಧ ಆಯೋಜಕರ ಸಹಕಾರದೊಂದಿಗೆ ಮೂರು ದಿನಗಳ ಕಾಲ ಚಿತ್ರದುರ್ಗದಲ್ಲಿ ನಡೆಸುತ್ತಿದ್ದಾರೆ. ಇದು ಪೂರ್ಣ ಪ್ರಮಾಣದಲ್ಲಿ ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದು, ಬಿಜೆಪಿಯಿಂದ ನಡೆಯುತ್ತಿರುವ ಕಾರ್ಯ ಕ್ರಮವಲ್ಲ’ ಎಂದು ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕೆ.ಎಸ್.ನವೀನ್ ಹೇಳಿದರು.

ADVERTISEMENT

‘ದೇಶದ ಅನೇಕ ರಾಜ್ಯಗಳಲ್ಲಿ ಈ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದೆ. ಆದರೆ, ನಮ್ಮ ಜಿಲ್ಲೆಯಲ್ಲಿ ಜಿಲ್ಲಾಡಳಿತ ಇದನ್ನು ನಿರ್ಲಕ್ಷಿಸಿದೆ. ಸರಿಯಾದ ಪ್ರಚಾರವನ್ನೂ ನೀಡಿಲ್ಲ. ಕೇಂದ್ರದಿಂದ ಮಾಹಿತಿ ನೀಡಿದ್ದರೂ ಈ ರೀತಿ ಮಾಡಿರುವುದು ನೋವಿನ ಸಂಗತಿ’ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರದಿಂದ ಯಾವ್ಯಾವ ಸೌಲಭ್ಯ ಗಳಿವೆ. ಅವುಗಳನ್ನು ಹೇಗೆ ಪಡೆದುಕೊಳ್ಳ ಬೇಕು ಎಂಬುದು ಕೆಲವರಿಗೆ ಗೊತ್ತಿರುವು ದಿಲ್ಲ. ಇದನ್ನೇ ಬಂಡವಾಳ ಮಾಡಿಕೊ ಳ್ಳುವ ಮಧ್ಯವರ್ತಿಗಳು ಜನರಿಂದ ಹಣ ವಸೂಲಿ ಮಾಡಿ ವಂಚಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಪ್ರತಿ ಗ್ರಾಮ ಗಳಲ್ಲಿ ಸಮುದಾಯ ಸೇವಾ ಕೇಂದ್ರ ಗಳನ್ನು ತೆರೆದು ಅಲ್ಲಿನ ಸಿಬ್ಬಂದಿ ಯಿಂದಲೇ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡುವುದರ ಜತೆಗೆ ಸಹಕಾರ ಕೂಡ ನೀಡಲಾಗುವುದು ಎಂದು ಹೇಳಿದರು.

ಮುದ್ರಾ ಯೋಜನೆ, ಫಸಲ್‌ ಬಿಮಾ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲಾ ಯೋಜನೆ ಸೇರಿದಂತೆ ಕೌಶಲ ಅಭಿವೃದ್ಧಿ ತರಬೇತಿ ಪಡೆದು ಸ್ವ ಉದ್ಯೋಗ ಕೈಗೊಳ್ಳಲು ಉಪಯುಕ್ತವಾದ ಮಾಹಿತಿಯನ್ನು ಮೋದಿ ಫೆಸ್ಟ್‌ನಲ್ಲಿ ನೀಡಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಜಿ.ನರೇಂದ್ರನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ರತ್ನಮ್ಮ, ಎಸ್‌ಬಿಐ  ಎಜಿಎಂ ನೀರಜ್‌ಕುಮಾರ್ ಸಿನ್ಹ, ಪ್ರಾದೇಶಿಕ ವ್ಯವಸ್ಥಾಪಕ ನಾಗೇಶ್ ಇದ್ದರು. ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಡಿ.ರಮೇಶ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.