ADVERTISEMENT

ನಿಷೇಧಾಜ್ಞೆ, ಟಿಪ್ಪು ಜಯಂತಿ ವಿರೋಧಿಸಿ ಮನವಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2017, 6:02 IST
Last Updated 11 ನವೆಂಬರ್ 2017, 6:02 IST

ಚಿತ್ರದುರ್ಗ: ತರಾಸು ರಂಗಮಂದಿರದಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ಆರಂಭವಾದ ನಂತರ ಬಿಜೆಪಿ ಮತ್ತು ವಿವಿಧ ಸಂಘಟನೆಗಳು ಜಯಂತಿ ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗುರುವಾರ ನ್ಯಾಯಾಲಯದಿಂದ ಅನುಮತಿ ಪಡೆದಿದ್ದ ಬಿಜೆಪಿ ಮುಖಂಡರು, ಬೆಳಿಗ್ಗೆ 11 ಗಂಟೆಯೊಳಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ವೇಳೆ ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆಯೊಂದಿಗೆ ಹೊರಟಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್, ಮುಖಂಡರಾದ ಮಲ್ಲಿಕಾರ್ಜುನ್ ಅವರನ್ನು ಒಳಗೊಂಡಂತೆ ಪೊಲೀಸರು ತಡೆದು, ಕಪ್ಪು ಬಟ್ಟೆ ತೆಗೆಯುವಂತೆ ಸೂಚಿಸಿದರು. ಬಳಿಕ ಕಪ್ಪುಬಟ್ಟೆ ತೆಗೆದು ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT