ADVERTISEMENT

ಪೆಟ್ರೋಲ್‌ ಬಂಕ್‌ಗಳಲ್ಲಿ ಶೌಚಾಲಯ ಬಳಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2017, 9:43 IST
Last Updated 17 ನವೆಂಬರ್ 2017, 9:43 IST

ನಾಯಕನಹಟ್ಟಿ: ಪಟ್ಟಣದ ಮೂರು ಪೆಟ್ರೋಲ್ ಬಂಕ್‌ಗಳಲ್ಲಿ ಇರುವ ಶೌಚಾಲಯಗಳನ್ನು ಬಳಕೆ ಮಾಡಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಡಿ.ಭೂತಪ್ಪ ಹೇಳಿದರು.

ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಇದೆ. ಅವುಗಳನ್ನು ನಿರ್ಮಾಣ ಮಾಡುವವರೆಗೂ ಪಟ್ಟಣದ ಎಲ್ಲ ಪೆಟ್ರೋಲ್‌ ಬಂಕ್‌ಗಳಲ್ಲಿ ಸಾರ್ವಜನಿಕರಿಗೆ ಶೌಚಾಲಯಗಳ ಬಳಕೆಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಪೆಟ್ರೋಲ್ ಬಂಕ್ ಮಾಲೀಕರ ಬಳಿ ಚರ್ಚಿಸಲಾಗಿದೆ. ಒಂದು ವೇಳೆ ಅವಕಾಶ ಕಲ್ಪಿಸದಿದ್ದರೆ ಸಾರ್ವಜನಿಕರು ದೂರು ಸಲ್ಲಿಸಬಹುದು. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.