ADVERTISEMENT

‘108’ ಆಂಬುಲೆನ್ಸ್‌ನಲ್ಲಿ ಅವಳಿ ಮಕ್ಕಳ ಜನನ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2017, 4:33 IST
Last Updated 17 ಏಪ್ರಿಲ್ 2017, 4:33 IST
ಹೊಸದುರ್ಗ: ತಾಲ್ಲೂಕಿನ ಅತ್ತಿಮಗ್ಗೆ ಸಮೀಪ ಶನಿವಾರ ತಡರಾತ್ರಿ ‘108 ಆಂಬುಲೆನ್ಸ್‌’ ವಾಹನದಲ್ಲಿ ದೇವಪುರ ಭೋವಿಹಟ್ಟಿಯ ಮೀನಾಕ್ಷಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
 
ತಡರಾತ್ರಿ 12.30ರ ಸುಮಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತೆರಳುತ್ತಿದ್ದ ಮೀನಾಕ್ಷಿ ಅವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತು. ಹೀಗಾಗಿ ಆಂಬುಲೆನ್ಸ್ ಸಿಬ್ಬಂದಿ ಸುರೇಶ್‌ ಮತ್ತು ಮಂಜುನಾಥ ಸ್ವಾಮಿ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ, ಅಲ್ಲೇ ಹೆರಿಗೆ ಮಾಡಿಸಿದರು.
 
ತಾಯಿ ಹಾಗೂ ಮಕ್ಕಳು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯವಾಗಿದ್ದಾರೆ. ಸಮಯ ಪ್ರಜ್ಞೆ ಮೆರೆದ ಆಂಬುಲೆನ್ಸ್‌ ಸಿಬ್ಬಂದಿಗೆ ಮೀನಾಕ್ಷಿ ಸಂಬಂಧಿಕರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.