ADVERTISEMENT

ಅನರ್ಹರಿಗೆ ಮನೆ: ಕ್ರಿಮಿನಲ್ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2017, 7:37 IST
Last Updated 26 ಜುಲೈ 2017, 7:37 IST

ಮಂಗಳೂರು: ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಅರ್ಹರಿಗೆ ವಸತಿ ಸೌಲಭ್ಯ ನೀಡುವ ಕಾರ್ಯಕ್ರಮ ಗ್ರಾಮ ಪಂಚಾಯಿತಿಗಳಿಂದ ಅನುಷ್ಠಾನಗೊಳಿಸ ಲಾಗುತ್ತಿದೆ. ಸರ್ಕಾರದ ವಸತಿ ಯೋಜ ನೆಯಡಿ ಪ್ರತಿಯೊಂದು ಫಲಾನುಭವಿ ಒಮ್ಮೆ ಮಾತ್ರವೇ ಸೌಲಭ್ಯ ಪಡೆಯಬಹುದಾಗಿದೆ.

ಒಂದು ವೇಳೆ ಒಂದಕ್ಕಿಂತ ಹೆಚ್ಚು ಬಾರಿ ವಸತಿ ಸೌಲಭ್ಯ ಪಡೆದಿದ್ದರೆ ಅಂಥವರನ್ನು ಅನರ್ಹರೆಂದು ಪರಿಗಣಿ ಸಲಾಗುವುದು ಎಂದು ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಎಂ.ಆರ್‌. ರವಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೆಲವು ಅನರ್ಹರು ವಸತಿ ಯೋಜನೆಯಡಿ, ವಸತಿ ಮಂಜೂರು ಮಾಡಿಸಿಕೊಂಡಿರು ವುದು ಜಿಲ್ಲಾ ಪಂಚಾಯಿತಿ ಗಮನಕ್ಕೆ ಬಂದಿದೆ. ಅಂತಹ ಅನರ್ಹರನ್ನು ಗುರು ತಿಸುವ ಅಭಿಯಾನ ಜಿಲ್ಲಾ ಪಂಚಾಯಿತಿ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಅಂತಹ ಅನರ್ಹ ಫಲಾನುಭವಿಗಳು ತುರ್ತಾಗಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿ ನೀಡಬೇಕು. ಅಕ್ರಮ ಹಾಗೂ ನಿಯಮ ಬಾಹಿರವಾಗಿ ಪಡೆದ ಅನುದಾನವನ್ನು ಕೂಡಲೇ ಹಿಂತಿರುಗಿಸಬೇಕು. ಇಲ್ಲವಾ ದಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗು ವುದು ಎಂದು ಎಚ್ಚರಿಸಿರುವ ಅವರು, ಅರ್ಹ ಫಲಾನುಭವಿಗಳು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2005-06 ರಿಂದ ವಸತಿ ಯೋಜನೆಗಳಡಿ ಆಯ್ಕೆಗೊಂಡಿರುವ ಎಲ್ಲ ಫಲಾ ನುಭವಿಗಳು 7 ದಿನಗಳೊಳಗೆ ಸಂಬಂ ಧಟ್ಟ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ತಮ್ಮ ಆಧಾರ್ ಕಾರ್ಡ್‌ನ ಮಾಹಿತಿಯನ್ನು ಕಡ್ಡಾಯವಾಗಿ ನೀಡಬೇಕು ಎಂದು ತಿಳಿಸಿದ್ದಾರೆ.

10 ದಿನದಲ್ಲಿ ಆರಂಭಿಸಿ: ಸರ್ಕಾರ ದಿಂದ ವಿವಿಧ ವಸತಿ ಯೋಜನೆಗಳಡಿ ಅರ್ಜಿ ಸಲ್ಲಿಸಿ ಫಲಾನುಭವಿಯಾಗಿ ಆಯ್ಕೆ ಗೊಂಡ ನಂತರ ತುರ್ತಾಗಿ ಮನೆಯ ಕಾಮಗಾರಿ ಪ್ರಾರಂಭಿಸಬೇಕು. ಇದು ಫಲಾನುಭವಿಗಳ ಕರ್ತವ್ಯವಾಗಿದೆ. ಸರಿ ಯಾದ ಸಮಯದಲ್ಲಿ ಮನೆಯ ಕಾಮ ಗಾರಿ ಪ್ರಾರಂಭಿಸದಿದ್ದಲ್ಲಿ ಸರ್ಕಾರದ ಯೋಜನೆಯ ಅನುಷ್ಠಾನದಲ್ಲಿಯೂ ಸಹ ಹಿನ್ನಡೆಯುಂಟಾಗುತ್ತದೆ ಎಂದು ಡಾ. ರವಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಸತಿ ಯೋಜನೆಗಳಡಿ 2015-16ರಿಂದ ಈವರೆಗೆ ಆಯ್ಕೆಗೊಂಡಿರುವ ಫಲಾನು ಭವಿಗಳಲ್ಲಿ ಬಂಟ್ವಾಳ ತಾಲ್ಲೂಕಿನಲ್ಲಿ 1,025, ಬೆಳ್ತಂಗಡಿ ತಾಲ್ಲೂಕಿನಲ್ಲಿ 1,431, ಮಂಗಳೂರು ತಾಲ್ಲೂಕಿನಲ್ಲಿ 1,041, ಪುತ್ತೂರು ತಾಲ್ಲೂಕಿನಲ್ಲಿ 612 ಹಾಗೂ ಸುಳ್ಯ ತಾಲ್ಲೂಕಿನಲ್ಲಿ 351 ಸೇರಿದಂತೆ ಒಟ್ಟು 4,460 ಫಲಾನುಭವಿಗಳು ಮನೆಯ ಕಾಮಗಾರಿಯನ್ನು ಈವರೆಗೆ ಪ್ರಾರಂಭ ಮಾಡಿಲ್ಲ. ಅಂತಹ ಫಲಾನುಭವಿಗಳು 10 ದಿನದೊಳಗೆ ಮನೆಯ ಕಾಮಗಾರಿಯನ್ನು ಪ್ರಾರಂಭಿಸ ಬೇಕು. ಇಲ್ಲವಾದಲ್ಲಿ ಅಂಥವರಿಗೆ ಮನೆ ಯ ಅವಶ್ಯಕತೆ ಇಲ್ಲವೆಂದು ರದ್ದುಪಡಿಸ ಲಾಗುವುದು ಎಂದು ತಿಳಿಸಿದ್ದಾರೆ.

ರದ್ದುಪಡಿಸಲಾದ ಫಲಾನುಭ ವಿಗಳಿಗೆ ಮುಂದಿನ ಯಾವುದೇ ವಸತಿ ಯೋಜನೆಯಡಿ ಇನ್ನೊಮ್ಮೆ ಆಯ್ಕೆಗೆ ಅವಕಾಶ ನೀಡಲಾಗುವುದಿಲ್ಲ. ರದ್ದುಪಡಿ ಸಲಾದ ಮನೆಗಳಿಗೆ ಬದಲಾಗಿ ಇತರೆ ಅರ್ಹ ವಸತಿರಹಿತರನ್ನು ಆಯ್ಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.