ADVERTISEMENT

ಅಶ್ವಿನಿ ಶೆಟ್ಟಿಗೆ ಎನ್‌ಎಸ್‌ಎಸ್‌ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 25 ಮೇ 2017, 5:40 IST
Last Updated 25 ಮೇ 2017, 5:40 IST
ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರಿನ ಯೇನೆಪೋಯ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಅಧಿಕಾರಿ ಡಾ. ಅಶ್ವಿನಿ ಶೆಟ್ಟಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರಿನ ಯೇನೆಪೋಯ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಅಧಿಕಾರಿ ಡಾ. ಅಶ್ವಿನಿ ಶೆಟ್ಟಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.   

ಮಂಗಳೂರು: ನಗರದ ಯೇನೆಪೋಯ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಅಧಿಕಾರಿ ಡಾ. ಅಶ್ವಿನಿ ಶೆಟ್ಟಿ ಅವರಿಗೆ 2016–17 ನೇ ಸಾಲಿನ ಉತ್ತಮ ಎನ್‌ಎಸ್‌ಎಸ್‌ ಯೋಜನಾಧಿಕಾರಿ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾ ರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಡಾ. ಅಶ್ವಿನಿ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.

ಡಾ. ಅಶ್ವಿನಿ ಅವರು, ಇತ್ತೀಚೆಗೆ ಯೇನೆಪೋಯ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಏಕತಾ ಶಿಬಿರ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಯೇನೆ ಪೋಯ ವಿಶ್ವವಿದ್ಯಾಲಯದ ಮಾನವಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿರುವ ಅವರಿಗೆ, ಎನ್‌ಎಸ್‌ಎಸ್‌ನಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದಕ್ಕಾಗಿ ಈ ಪ್ರಶಸ್ತಿ ಲಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.