ADVERTISEMENT

ಎತ್ತಿನ ಹೊಳೆ ಯೋಜನೆ ಜಾರಿಗೆ ಖಂಡನೆ

ವಿವಿಧ ಸಂಘಟನೆಗಳ ಮುಖಂಡರು ಭಾಗಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2017, 4:47 IST
Last Updated 4 ಫೆಬ್ರುವರಿ 2017, 4:47 IST
ಮಂಗಳೂರು: ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿರುವ ಈ ಸಮಯ ದಲ್ಲಿ ಯಾವುದೇ ಕಾರಣಕ್ಕೂ ಎತ್ತಿನ ಹೊಳೆ ಯೋಜನೆ ಅನುಷ್ಠಾನ ಮಾಡ ದಂತೆ ತಡೆಯಲು ಇದೇ 10ರಂದು ಅಮರಣಾಂತ ಉಪವಾಸ ಹಮ್ಮಿಕೊಳ್ಳ ಲಾಗುತ್ತದೆ ಎಂದು ನೇತ್ರಾವತಿ ಸಂರ ಕ್ಷಣಾ ಸಮಿತಿ ಸಭೆಯಲ್ಲಿ ನಿರ್ಣಯಿ ಸಲಾಗಿದೆ.
 
ಶುಕ್ರವಾರ ಇಲ್ಲಿ ನಡೆದ ಸಭೆಯಲ್ಲಿ ಕಂಬಳ ಪರವಾಗಿರುವ ಎಲ್ಲರೂ ಎತ್ತಿನ ಹೊಳೆ ಯೋಜನೆಯನ್ನು ವಿರೋಧಿ ಸಬೇಕು ಎಂದು ತಿಳಿಸಲಾಯಿತು.
 
ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ಈ ವೇಳೆಯಲ್ಲಿ ಜನರಿಗೆ ಮಾರಕ ಈ ಯೋಜನೆಯನ್ನು ಎಲ್ಲರೂ ಒಟ್ಟಾಗಿ ಖಂಡಿಸಬೇಕು. ಈ ಕಾರಣಕ್ಕಾಗಿ ಸಂಸದ ನಳಿನ್‌ಕುಮಾರ್‌ ಕಟೀಲ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಯೋಜನೆ ಸ್ಥಗಿತಗೊಳಿಸುವವರೆಗೆ ಯಾವುದೇ ಕಾರ ಣಕ್ಕೂ ಈ ಅಮರಣಾಂತ ಉಪವಾಸ ಹೋರಾಟ ನಿಲ್ಲದು ಎಂದು ಮಾಜಿ ಶಾಸಕ ಹಾಗೂ ನೇತ್ರಾವತಿ ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಮಾರ್‌ ಶೆಟ್ಟಿ ಹೇಳಿದರು.
 
ಜಿಲ್ಲೆಯಲ್ಲಿ ನೀರಿನ ಬವಣೆ ಇದೆ. ಯಾವುದೇ ಕಾರಣಕ್ಕೂ ಎತ್ತಿನ ಹೊಳೆ ಯೋಜನೆ ಜಾರಿ ಬೇಡ ಎಂಬ ನಿರ್ಣಯವನ್ನು  ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಸಭೆಯಲ್ಲಿ ಮಂಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದರೂ ಸರ್ಕಾರ ಈ ಯೋಜನೆ ಜಾರಿಗೆ ಮುಂದಾಗಿರುವುದು ಜನ ವಿರೋಧಿ ನೀತಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು. 
 
ಬಿಲ್ಲವರ ಸಂಘದ ಮುಖಂಡ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಸಿದ್ದರಾಮಯ್ಯ ಸರ್ಕಾರವು ಜನವಿರೋಧಿ ಯಾದ ಎತ್ತಿನ ಹೊಳೆ ಮೂಲಕ ಜಾರಿಗೆ ತರುವುದಕ್ಕೆ ಹೊರಟಿದೆ. ಇದನ್ನು ಎಲ್ಲರೂ ಒಟ್ಟಾಗಿ ಖಂಡಿಸಬೇಕು. ಈ ಯೋಜನೆ ಜಾರಿಯಾಗದಂತೆ ತಡೆಯು ವುದಕ್ಕೆ ಎಲ್ಲರೂ ಸಂಘಟಿತವಾದ ಹೋರಾಟ ನಡೆಸುವುದಕ್ಕೆ ಸಹಕಾರ ನೀಡಬೇಕು ಎಂದರು.
 
ಕರಾವಳಿ ಎಜ್ಯುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಗಣೇಶರಾವ್‌ ಮಾತನಾಡಿ, ಯಾವ ರಾಜಕೀಯ ಮುಖಂಡರು ಹಾಗೂ ಜನಪ್ರತಿನಿಧಿಗಳು ಈ ಹೋರಾಟವನ್ನು ಬೆಂಬಲಿಸುವುದಿಲ್ಲವೊ ಅಂತಹವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದರು.
 
ವಿಶ್ವ ಹಿಂದು ಪರಿಷತ್‌ ರಾಜ್ಯ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್‌,  ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ ಕುಮಾರ್ ರೈ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೇರಿದಂತೆ ವಿವಿಧ ಸಂಘಟನೆ ಮುಖಂಡರು ಹಾಗೂ ಹೋರಾಟಗಾರು ಸಭೆಯಲ್ಲಿ ಪಾಲ್ಗೊಂಡಿದ್ದರು.   
 
**
ಅಮರಣಾಂತ ಉಪವಾಸ
ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ಸಂಪೂರ್ಣ ವಾಗಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಇದೇ 10ರಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪ ಅಮರಣಾಂತ ಉಪವಾಸವನ್ನು ನಡೆಸಲು ನೇತ್ರಾವತಿ ಸಂರಕ್ಷಣಾ ಸಮಿತಿ ನಿರ್ಧರಿಸಿದೆ.
 
5 ಸಾವಿರಕ್ಕೂ ಹೆಚ್ಚು ಜನ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.  ಪ್ರತಿಭಟನೆ ಹತ್ತಿಕ್ಕುವ ಕೃತ್ಯಕ್ಕೆ ಸರ್ಕಾರ ಮುಂದಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶುಕ್ರವಾರ ನಡೆದ ಸಮಿತಿಯ ಸಭೆಯಲ್ಲಿ ಹೋರಾಟಗಾರ ವಿಜಯಕುಮಾರ್‌ ಶೆಟ್ಟಿ ಎಚ್ಚರಿಸಿದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.