ADVERTISEMENT

ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ರೈ

ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2017, 5:01 IST
Last Updated 4 ಫೆಬ್ರುವರಿ 2017, 5:01 IST
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು.
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು.   
ಬಂಟ್ವಾಳ: ‘ಅಂತರರಾಷ್ಟ್ರೀಯ ಮಟ್ಟ ದಲ್ಲಿ ಇಂಧನ ಬೆಲೆ ಇಳಿದಿದ್ದರೂ ಕೇಂದ್ರ ಸರ್ಕಾರ ಮಾತ್ರ ದಿನೇ ದಿನೇ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರ ಜೀವನವನ್ನು ಮತ್ತಷ್ಟು ಹದಗೆಡುವಂತೆ ಮಾಡಿದೆ. ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಆಡಳಿತಾವಧಿಯಲ್ಲಿ ಇಂಧನ ಬೆಲೆ ಏರಿಕೆ ಆದಾಗ ಬೊಬ್ಬೆ ಹೊಡೆದು ಬೀದಿ ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಈಗ ಎಲ್ಲಿದ್ದಾರೆ...?’ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಬಿ.ರಮಾನಾಥ ರೈ ಪ್ರಶ್ನಿಸಿದರು.
 
ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
 
 ‘ಹಳೆ ನೋಟು ಅಮಾನ್ಯಗೊಳಿಸಿದ ಬಳಿಕ ಬಡವರು ಬ್ಯಾಂಕಿನ ಎದುರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದ್ದು, ಬಜೆ ಟ್‌ನಲ್ಲಿಯೂ ಈ ಸಮಸ್ಯೆಗೆ ಸೂಕ್ತ ಪರಿ ಹಾರ ಸಿಕ್ಕಿಲ್ಲ. ಕೇವಲ ಪ್ರಚಾರದಿಂದಲೇ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇಲ್ಲ ಎಂಬುದು ಸಾಬೀತಾಗಿದೆ’ ಎಂದರು. 
 
ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ, ಎಂ. ಎಸ್. ಮಹಮ್ಮದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರ ಹಾಸ ಕರ್ಕೇರ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಜನಾರ್ದನ ಚಂಡ್ತಿಮಾರ್ ಮತ್ತಿತರರು ಮಾತ ನಾಡಿದರು. 
 
ಜಿಲ್ಲಾ ಪಂಚಾಯಿತಿ ಸದಸ್ಯ ಬಿ. ಪದ್ಮಶೇಖರ ಜೈನ್, ಮಾಜಿ ಸದಸ್ಯ  ಮಾಜಿ ಸದಸ್ಯ ಎ.ಸಿ.ಭಂಡಾರಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ ಮತ್ತಿತರರು ಇದ್ದರು.
 
**
ಕೇವಲ ಪ್ರಚಾರದಿಂದಲೇ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇಲ್ಲ.
-ಬಿ.ರಮಾನಾಥ ರೈ , ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.