ADVERTISEMENT

ಟೆಂಡರ್ ಅವಧಿ ಮುಗಿದ ಕೂಡಲೇ ಸುರತ್ಕಲ್ ಟೋಲ್ ಬಂದ್: ನಳಿನ್

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2017, 9:30 IST
Last Updated 14 ಸೆಪ್ಟೆಂಬರ್ 2017, 9:30 IST

ಮೂಲ್ಕಿ: ಸುರತ್ಕಲ್‌ನ ಟೋಲ್‌ನ ವಸೂ ಲಾತಿಗೆ ಈಗಿರುವ ಟೆಂಡರ್ ಅವಧಿ ಮುಗಿದ ಕೂಡಲೇ ಸುರತ್ಕಲ್ ಟೋಲ್ ಬಂದ್ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಅವರು ಮೂಲ್ಕಿಯ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹೆಜಮಾಡಿ ಹಾಗೂ ಸುರತ್ಕಲ್ ನಡುವೆ ಕೇವಲ 12 ಕಿ.ಮೀ. ಅಂತರದಲ್ಲಿ ಎರಡು ಟೋಲ್‌ಗಳಿದ್ದು, ಹೆಜಮಾಡಿ ಟೋಲ್ ಆರಂಭದ ಬಳಿಕ ಸುರತ್ಕಲ್ ಟೋಲ್ ಮಚ್ಚಲಾಗುವುದು ಎಂದರು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಬಾಕಿ ಇದ್ದು, ಅದು ಪೂರ್ಣಗೊಂಡ ಕೂಡಲೇ ಎಲ್ಲಾ ಸರ್ವಿಸ್‌ ರಸ್ತೆಗಳು ನಿರ್ಮಾಣಗೊಳ್ಳಲಿವೆ. ಹಳೆಯಂಗಡಿಯಿಂದ ಮೂಲ್ಕಿಯವರೆಗೆ ಅಗತ್ಯವಿರುವ ಎಲ್ಲ ಕಾಮಗಾರಿಗಳನ್ನು ಶೀಘ್ರವೇ ನಿರ್ವಹಿಸಲಾಗುವುದು ಎಂದು ತಿಳಿಸಿದರು.

ಮೂಲ್ಕಿ -ಪೊಳಲಿ ಚತುಷ್ಪಥ ಹೆದ್ದಾರಿ ನಿರ್ಮಾಣ ಯೋಜನೆ ಚಾಲನೆಯಲ್ಲಿದ್ದು, ಮೂಲ್ಕಿ -ಬಿ.ಸಿರೋಡ್-ಪೊಳಲಿ-ಬಜ್ಪೆ ರಸ್ತೆ ಹಾಗೂ ಮೇಲ್ಕಾರ್‌ನಿಂದ ಕೊಣಾಜೆವರೆಗಿನ ರಸ್ತೆ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸುತ್ತಿದೆ. ಈಗಾಗಲೇ ಯೋಜನೆ ಡಿಪಿಆರ್ ಹಂತದಲ್ಲಿದೆ. ಮುಂದಿನ ವರ್ಷ ಕಾಮಗಾರಿ ನಡೆಯುವ ನಿರೀಕ್ಷೆ ಇದೆ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ಬಿಜೆಪಿ ಮುಖಂಡರಾದ ಉಮಾನಾಥ ಕೋಟ್ಯಾನ್, ರಂಗನಾಥ ಶೆಟ್ಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.