ADVERTISEMENT

ಡಿಸಿ ಕಚೇರಿ ಎದುರು ಪ್ರತಿಭಟನೆ

ನಿವೇಶನ ರಹಿತರ ಬೇಡಿಕೆ ಈಡೇರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2016, 9:43 IST
Last Updated 25 ಅಕ್ಟೋಬರ್ 2016, 9:43 IST
ಮಂಗಳೂರು ನಗರದ ನಿವೇಶನ ರಹಿತರ ಬೇಡಿಕೆಗಳ ಇತ್ಯರ್ಥಕ್ಕೆ ಜಿಲ್ಲಾಧಿಕಾರಿಯವರು ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ನಿವೇಶನ ರಹಿತರ ಹೋರಾಟ ಸಮಿತಿ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.– ಪ್ರಜಾವಾಣಿ ಚಿತ್ರ
ಮಂಗಳೂರು ನಗರದ ನಿವೇಶನ ರಹಿತರ ಬೇಡಿಕೆಗಳ ಇತ್ಯರ್ಥಕ್ಕೆ ಜಿಲ್ಲಾಧಿಕಾರಿಯವರು ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ನಿವೇಶನ ರಹಿತರ ಹೋರಾಟ ಸಮಿತಿ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.– ಪ್ರಜಾವಾಣಿ ಚಿತ್ರ   

ಮಂಗಳೂರು: ನಗರದ ನಿವೇಶನ ರಹಿತರ ಬೇಡಿಕೆಗಳನ್ನು ಇತ್ಯರ್ಥಪಡಿಸಿ ಅವರಿಗೆ ವಸತಿ ಸೌಲಭ್ಯ ಒದಗಿಸುವ ವಿಚಾರದಲ್ಲಿ ಜಿಲ್ಲಾಧಿಕಾರಿಯವರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಮಂಗಳೂರು ನಿವೇಶನ ರಹಿತರ ಹೋರಾಟ ಸಮಿತಿ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಮಿನಿ ವಿಧಾನಸೌಧದಿಂದ ಜಿಲ್ಲಾಧಿ ಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ನಿವೇಶನ ರಹಿತರ ಹೋರಾಟ ಸಮಿತಿ ಸದಸ್ಯರು, ತಮ್ಮ ಬೇಡಿಕೆಗಳನ್ನು ಈಡೇರಿ ಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಮಹಾನಗರ ಪಾಲಿಕೆ ಆಡಳಿತವು ಬಡ ವರ್ಗದ ವಸತಿ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ ಎಂದು ದೂರಿದ ಪ್ರತಿ ಭಟನಾಕಾರರು, ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್‌ ತಕ್ಷ ಣವೇ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ವಸಂತ ಆಚಾರಿ, ‘ನಿವೇ ಶನ ರಹಿತರ ಸಮಸ್ಯೆಗೆ ಪರಿಹಾರ ದೊರ ಕಿಸುವಂತೆ ಒತ್ತಾಯಿಸಿ ಎರಡೂವರೆ ವರ್ಷಗಳಿಂದ ಪ್ರತಿಭಟನೆ ನಡೆಯುತ್ತಿದೆ. ಬಡವರಿಗೆ ವಾಸಿಸಲು ಒಂದು ನಿವೇಶ ನವೂ ಇಲ್ಲ. ನಿವೇಶನ ಕೋರಿ ಸಲ್ಲಿಸಿದ ಅರ್ಜಿಗಳನ್ನೇ ನಾಪತ್ತೆ ಮಾಡಲಾಗಿದೆ. ಭೂಮಾಲೀಕರು ಮತ್ತು ರಿಯಲ್‌ ಎಸ್ಟೇಟ್‌ ಮಾಫಿಯಾದವರ ಒತ್ತಡಕ್ಕೆ ಮಣಿಯುತ್ತಿರುವ ಮಹಾನಗರ ಪಾಲಿ ಕೆಯು ಬಡವರ ಸಮಸ್ಯೆಗೆ ಪರಿಹಾರ ದೊರಕಿಸಲು ಪ್ರಯತ್ನಿಸುತ್ತಿಲ್ಲ’ ಎಂದು ಆರೋಪಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಯಾದವ ಶೆಟ್ಟಿ, ಸಿಪಿಎಂ ನಗರ ಘಟಕದ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸಿಪಿಎಂ ಮುಖಂಡ ರಾದ ಜೆ. ಬಾಲಕೃಷ್ಣ ಶೆಟ್ಟಿ, ಜಯಂತಿ ಬಿ. ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಡಿವೈಎಫ್‍ಐ ಮುಖಂಡ ಸಂತೋಷ್ ಬಜಾಲ್ ಮಾತನಾಡಿದರು.

ಹೋರಾಟ ಸಮಿತಿಯ ಅಧ್ಯಕ್ಷರಾದ ಪ್ರೇಮನಾಥ ಜಲ್ಲಿಗುಡ್ಡೆ , ಕಾರ್ಯದರ್ಶಿ ಸಂತೋಷ್ ಶಕ್ತಿನಗರ, ಖಜಾಂಚಿ ಪ್ರಭಾವತಿ ಬೋಳಾರ ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿವೇಶನರಹಿತರ ಪಟ್ಟಿಯಿಂದ ಕೈಬಿಡಲಾದ ಪುರುಷ ಅರ್ಜಿದಾರರ ಹೆಸರುಗಳನ್ನು ಮತ್ತೆ ಪಟ್ಟಿಗೆ ಸೇರಿಸ ಬೇಕು, ಕಣ್ಣೂರಿನ ಕನ್ನಗುಡ್ಡೆಯಲ್ಲಿ ನಿವೇಶನ ರಹಿತರಿಗಾಗಿ ಕಾಯ್ದಿರಿಸಿರುವ 11 ಎಕರೆ 25 ಸೆಂಟ್ಸ್‌ ಜಮೀನಿನ ಪೂರ್ಣ ವಿವರಗಳನ್ನು ಬಹಿರಂಗಪಡಿಸ ಬೇಕು. ಮಂಗಳೂರು ನಗರದಲ್ಲಿ
ನಿವೇಶನ ಹಂಚಿಕೆಗೆ ಆಯ್ಕೆ ಮಾಡಿರುವ 2,000 ನಿವೇಶನರಹಿತರ ಅಂತಿಮ ಪಟ್ಟಿಯನ್ನು ಬಹಿರಂಗಪಡಿಸಬೇಕು ಎಂಬ ಬೇಡಿಕೆಗಳುಳ್ಳ ಮನವಿಯನ್ನು ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.