ADVERTISEMENT

ದಕ್ಷಿಣ ಕನ್ನಡ ಮೊದಲ ನವೋದ್ಯಮ ಜಿಲ್ಲೆ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದಿಂದ ಆಯ್ಕೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2017, 11:11 IST
Last Updated 13 ಫೆಬ್ರುವರಿ 2017, 11:11 IST

ಮಂಗಳೂರು: ದೇಶದ ಮೊದಲ ನವೋದ್ಯಮ ಜಿಲ್ಲೆ ಎಂಬ ಕೀರ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಪಾತ್ರವಾಗಲಿದೆ. ನವೋದ್ಯಮಗಳ ಸ್ಥಾಪನೆಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಈ ಪಟ್ಟ ನೀಡಲು ಕೇಂದ್ರ ಕೈಗಾರಿಕಾ ನೀತಿ ಮತ್ತು ಉತ್ತೇಜನ ಇಲಾಖೆ ಹಾಗೂ ನೀತಿ ಆಯೋಗಗಳು ಕೈಗೊಂಡಿವೆ.

ದಕ್ಷಿಣ ಕನ್ನಡ ಜಿಲ್ಲೆಯನ್ನು ದೇಶದ ಮೊದಲ ನವೋದ್ಯಮ ಜಿಲ್ಲೆಯನ್ನಾಗಿ ಘೋಷಿಸುವುದಕ್ಕೆ ಪೂರಕವಾಗಿ ಪ್ರಕ್ರಿ ಯೆಗಳನ್ನು ಆರಂಭಿಸಿರುವುದಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್‌ ಇತ್ತೀಚೆಗೆ ದೆಹಲಿಯಲ್ಲಿ ಖಚಿತಪಡಿಸಿದ್ದಾರೆ. ಜಿಲ್ಲೆಯ ಸಂಸದ ನಳಿನ್‌ಕುಮಾರ್‌ ಕಟೀಲ್‌ ಸೇರಿದಂತೆ ಕರ್ನಾಟಕದ ಕೆಲವು ಜನಪ್ರತಿನಿಧಿಗಳ ಜೊತೆ ಈ ಮಾಹಿತಿ ಹಂಚಿಕೊಂಡಿರುವ ಅವರು, ಯೋಜನೆಯ ಅಡಿಯಲ್ಲಿ ಜಿಲ್ಲೆಗೆ ವಿಶೇಷ ಸವಲತ್ತುಗಳು ದೊರೆಯಲಿವೆ ಎಂಬ ಸುಳಿವು ನೀಡಿದ್ದಾರೆ.

ಸಚಿವರ ಸೂಚನೆಯಂತೆ ಜನವರಿ ತಿಂಗಳಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ಇಲ್ಲಿ ನವೋದ್ಯಮ ಸ್ಥಾಪನೆಗೆ ಇರುವ ಅವಕಾಶಗಳು ಮತ್ತು ಕಲ್ಪಿಸಬೇಕಿರುವ ಸೌಲಭ್ಯಗಳ ಕುರಿತು ವರದಿ ಸಲ್ಲಿಸಿತ್ತು. ಅದಕ್ಕೆ ಒಪ್ಪಿಗೆ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ನೀತಿ ಆಯೋಗಗಳು, ಜಿಲ್ಲೆಯನ್ನು ಪ್ರಥಮ ನವೋದ್ಯಮ ಜಿಲ್ಲೆ ಎಂಬುದಾಗಿ ಘೋಷಿಸಲು ಹಸಿರು ನಿಶಾನೆ ತೋರಿವೆ.

ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಸಂಸದ ನಳಿನ್‌ಕುಮಾರ್ ಕಟೀಲ್‌, ‘ದಕ್ಷಿಣ ಕನ್ನಡ ಜಿಲ್ಲೆಗೆ ದೇಶದ ಪ್ರಥಮ ನವೋದ್ಯಮ ಜಿಲ್ಲೆ ಎಂಬ ಕೀರ್ತಿ ದೊರಕುತ್ತಿರುವುದು ಸಂತಸ ತಂದಿದೆ. ಈ ಸಂಬಂಧ ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ನಿರ್ಮಲಾ ಸೀತಾರಾಮನ್‌ ಅವರು ನನಗೆ ಖುದ್ದಾಗಿ ತಿಳಿಸಿದ್ದಾರೆ. ಒಂದು ವಾರದೊಳಗೆ ಯೋಜನೆಯ ಮಾರ್ಗಸೂಚಿಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ಘೋಷ ಣೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಚಹರೆಯೇ ಬದಲಾಗಿದೆ’ ಎಂದರು.

ಈ ಯೋಜನೆಯಡಿ ಅಟಲ್‌ ಇನ್ನೋವೇಷನ್‌ ಮಿಷನ್‌ ಅನುದಾನದ ನೆರವಿನಲ್ಲಿ ಜಿಲ್ಲೆಯ 20 ಶಾಲೆಗಳಲ್ಲಿ ಅಟಲ್‌ ಟಿಂಕರಿಂಗ್‌ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತದೆ. ಈ ಪ್ರಯೋಗಾಲಯಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ತ್ರಿ–ಡಿ ಮುದ್ರಣ ಯಂತ್ರಗಳು, ಅತ್ಯಾಧುನಿಕ ಸಾಫ್ಟ್‌ವೇರ್‌ಗಳನ್ನು ಅವು ಹೊಂದಿ ರುತ್ತವೆ. ಜಿಲ್ಲೆಯ ಐದು ಕಾಲೇಜುಗಳಲ್ಲಿ ಟಿಂಕರಿಂಗ್‌ ಪ್ರಯೋಗಾ ಲಯಗಳು ಮತ್ತು ಇನ್‌ಕ್ಯುಬೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಎರಡು ಸಂಸ್ಥೆಗಳನ್ನು ಉನ್ನತ ಅಧ್ಯಯನ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸ ಲಾಗುತ್ತದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಸಂಸದರಿಗೆ ಮಾಹಿತಿ ನೀಡಿದೆ.

ಈ ಯೋಜನೆಯಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಉತ್ಪಾ ದನೆ ಮತ್ತು ಇಂಟರ್‌ನೆಟ್‌ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯತ್ತ ಹೂಡಿಕೆದಾರರನ್ನು ಆಕರ್ಷಿ ಸುವ ಉದ್ದೇಶದಿಂದ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ.

ಬೆಂಗಳೂರು ಮತ್ತು ಹೈದರಾಬಾದ್‌ ನಗರಗಳಿಗೆ ಪರ್ಯಾಯವಾಗಿ ಮಂಗ ಳೂರು ನಗರವನ್ನು ಅಭಿವೃದ್ಧಿಪಡಿ ಸುವುದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂಬ ವಿವರವನ್ನೂ ಇಲಾಖೆ ಅಧಿಕಾರಿಗಳು ಸಂಸದರ ಜೊತೆ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.