ADVERTISEMENT

ನೀರಿನ ಸಮಸ್ಯೆ ಪರಿಹಾರಕ್ಕೆ ಸಿದ್ಧತೆ ಮಾಡಿ

ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2017, 6:35 IST
Last Updated 11 ಮಾರ್ಚ್ 2017, 6:35 IST
ಉಡುಪಿ: ಸರ್ಕಾರಿ ಜಲಮೂಲಗಳ ಜೊತೆಗೆ ಖಾಸಗಿ ಕೊಳವೆ ಬಾವಿ ಮತ್ತು ತೆರೆದ ಬಾವಿಗಳನ್ನು ಬಾಡಿಗೆಗೆ ಪಡೆ ಯುವ ಮೂಲಕ ಜಿಲ್ಲೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಸಜ್ಜಾಗಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರರಾವ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರ ವಾರ ನಡೆದ ಕಂದಾಯ ಹಾಗೂ ಇತರ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕುಡಿಯುವ ನೀರಿನ ವಿಭಾಗದ ಅಧಿಕಾರಿಗಳು ಇನ್ನ ಷ್ಟು ಚುರುಕಾಗಿ ಕೆಲಸ ಮಾಡಿ ಈಗಾಗಲೇ ನಿಗದಿಪಡಿಸಿರುವ ಗುರಿ ಸಾಧಿಸ ಬೇಕು.
 
ನಬಾರ್ಡ್ ಅನುದಾನದಲ್ಲಿ ಕೈಗೊಂಡ ಹಾಗೂ ಕೈಗೊಳ್ಳಬೇಕಾದ ಯೋಜನೆಗಳ ಅಂದಾಜುಪಟ್ಟಿಯನ್ನು ಜಿಲ್ಲಾಧಿಕಾರಿ ಮುಖಾಂತರ ನನಗೆ ಸಲ್ಲಿಸಿ. ಜಿಲ್ಲೆಯಲ್ಲಿ ಬೀಜೋತ್ಪಾದನೆಗೆ ಹೆಚ್ಚಿನ ಒತ್ತು ನೀಡಿ ಎಂದು ಅವರು ಹೇಳಿದರು.
 
ಪ್ರಸಕ್ತ ಜಿಲ್ಲೆ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ, ಇದಕ್ಕಾಗಿ ರೂಪಿಸಿರುವ ಶಾಶ್ವತ ಯೋಜನೆಗಳು ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮಾಹಿತಿ ಪಡೆದರು.
 
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿಭಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಇನ್ನೂ ಟ್ಯಾಂಕರ್‌ ಮೂಲಕ ನೀರು ನೀಡಲು ಆರಂಭಿಸಿಲ್ಲ ಎಂದು ನಗರಸಭೆ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹೇಳಿದರು.
 
ಅಮೃತ್‌ ಯೋಜನೆಯಲ್ಲಿ ಶೀಂಭ್ರ ದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲು ₹108 ಕೋಟಿ ಬಿಡುಗಡೆಯಾಗಿದೆ. ಅಣೆ ಕಟ್ಟು ನಿರ್ಮಾಣವಾದರೆ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗ ಲಿದೆ ಎಂದು ಪೌರಾಯುಕ್ತ ಡಿ. ಮಂಜು ನಾಥಯ್ಯ ಹೇಳಿದರು. ಉಡುಪಿಗೆ ನಗರಸಭೆಗೆ ₹50 ಲಕ್ಷ ಹೆಚ್ಚಿನ ಅನುದಾನ ನೀಡುವಂತೆ ಅವರು ಮನವಿ ಮಾಡಿದರು.
 
ಕುಂದಾಪುರ, ಕಾರ್ಕಳ, ಸಾಲಿ ಗ್ರಾಮ, ಕಾಪುವಿನಲ್ಲೂ ನೀರಿನ ಸಮಸ್ಯೆ ಸದ್ಯಕ್ಕಿಲ್ಲ ಎಂದು ಅಧಿಕಾರಿಗಳು ಹೇಳಿದರು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಒಟ್ಟು 131 ಹಳ್ಳಿಗಳಲ್ಲಿ ಜಲ ಕ್ಷಾಮ ವಿರುವುದನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜ ನಾಧಿಕಾರಿ ಹೇಳಿದರು.
 
₹8 ಕೋಟಿ ಅನುದಾನದಲ್ಲಿ 87 ಕಡಲ್ಕೊರೆತ ತುರ್ತು ಕಾಮಗಾರಿ ನಿರ್ವ ಹಿಸಿದ್ದು, ₹12 ಕೋಟಿ ಬೇಡಿಕೆ ಸಲ್ಲಿಸ ಲಾಗಿತ್ತು ಎಂದು ಅಧಿಕಾರಿಗಳು ಹೇಳಿ ದರು. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.