ADVERTISEMENT

ಬ್ರಹ್ಮಕಲಶ ಪುಣ್ಯದ ಕಾರ್ಯ: ಸುಬ್ರಹ್ಮಣ್ಯ ಶ್ರೀ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2015, 10:54 IST
Last Updated 5 ಮಾರ್ಚ್ 2015, 10:54 IST

ಉಳ್ಳಾಲ: ಬ್ರಹ್ಮಕಲಶ ಪುಣ್ಯದ ಕಾರ್ಯವಾಗಿದ್ದು ಪ್ರತಿಯೊಬ್ಬರ ಮನ ಮನೆಗಳನ್ನು ಬೆಳಗಲಿ. ಆತ್ಮಶುದ್ಧಿ ಕ್ರಿಯಾಶುದ್ಧಿ ಭಾವಶುದ್ಧಿಯಾಗಿ ಅನ್ಯೋ­ನ್ಯತೆ­ಯಿಂದ ಬದುಕುವ ಕಾರ್ಯವಾಗಲಿ ಎಂದು ಸುಬ್ರಹ್ಮಣ್ಯದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ನುಡಿದರು.

ಅವರು ತಲಪಾಡಿ ದೇವಿಪುರದ ದುರ್ಗಾ­ಪರಮೆಶ್ವರೀ ಅಮ್ಮನವರ ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಧಾರ್ಮಿಕ ಕಾರ್ಯಕ್ರಮದಲ್ಲಿ ಮಂಗಳವಾರ ಆಶೀರ್ವಚನ ನೀಡಿದರು.

ಧಾರ್ಮಿಕ ಆಚರಣೆಯಲ್ಲಿ ವೈಜ್ಞಾನಿಕತೆ ಕುರಿತಾಗಿ ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಕಶೆಕೋಡಿ ಸೂರ್ಯನಾರಾಯಣ ಭಟ್ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿದ ಶರವು ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ  ರಾಘವೇಂದ್ರ ಶಾಸ್ತ್ರಿ ಅವರು, ಪೂರ್ಣಭಾವದಿಂದ ಭಗವಂತನನ್ನು ಭಕ್ತಿಯಿಂದ ಭಜಿಸಿದರೆ ದೇವರ ಸಂಪೂರ್ಣ ಅನುಗ್ರಹ ಸಾಧ್ಯ ಎಂದರು.

ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ, ಶಕ್ತಿನಗರ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ.ನಾಯ್ಕ್, ಕ್ಯಾಂಪ್ಕೊ ಅಧ್ಯಕ್ಷ ಪದ್ಮನಾಭ ಕೊಂಕೋಡಿ, ಆದ್ಯಪಾಡಿ ನೀಲಕಂಠ ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಶೆಡ್ಡೆ ಮಂಜುನಾಥ ಭಂಡಾರಿ, ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಾಮಣ್ಣ ಶೆಟ್ಟಿ ಮುಗಿಪು, ಪಯ್ಯನ್ನೂರಿನ ಜ್ಯೋತಿಷಿ ವಿ.ಪಿ. ಗಿರೀಶ್ ಪೊದ್ವಾಳ್, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮ್ ಮನೋಹರ್ ರೈ ತಲಪಾಡಿ ದೊಡ್ಡಮನೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಸಿ.ಆಳ್ವ ನೆತ್ತಿಲಬಾಳಿಕೆ ಹಾಗೂ ಕಾರ್ಯಾಧ್ಯಕ್ಷ ವಿನಯ್ ನಾಯ್ಕ್ ಉಪಸ್ಥಿತರಿದ್ದರು. 

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ವಕೀಲ ರವೀಂದ್ರನಾಥ ರೈ ಸ್ವಾಗತಿಸಿದರು. ಬ್ರಹ್ಮ­ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಪ್ರೊ.ಎಂ.ಬಿ.­ಪುರಾಣಿಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತುಳು ಅಕಾಡೆಮಿ ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ  ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ನಾರಾಯಣ ದೇವಿಪುರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.