ADVERTISEMENT

‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಖಚಿತ’

​ಪ್ರಜಾವಾಣಿ ವಾರ್ತೆ
Published 27 ಮೇ 2017, 6:39 IST
Last Updated 27 ಮೇ 2017, 6:39 IST
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ವರ್ಷಾಚರಣೆ ಪ್ರಯುಕ್ತ ನಡೆದ ‘ಚಾಯ್ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮಾತನಾಡಿದರು.
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ವರ್ಷಾಚರಣೆ ಪ್ರಯುಕ್ತ ನಡೆದ ‘ಚಾಯ್ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮಾತನಾಡಿದರು.   

ಬಂಟ್ವಾಳ: ಮೂರು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದರೆ, ಮುಂದಿನ ವರ್ಷ  ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರುವುದು ಖಚಿತ ಎಂದು ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಹೇಳಿದರು.

ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಶುಕ್ರವಾರ ಸಂಜೆ ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಏರ್ಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ವರ್ಷಾಚರಣೆ ಪ್ರಯುಕ್ತ ನಡೆದ ‘ಚಾಯ್ ಪೇ ಚರ್ಚಾ’ ದಲ್ಲಿ ಅವರು ಮಾತನಾಡಿದರು.

ಈ ಹಿಂದೆ ಪ್ರತಿದಿನ ಭ್ರಷ್ಟಾಚಾರ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ನೇತೃ ತ್ವದ ಯುಪಿಎ ಸರ್ಕಾರ ಸುದ್ದಿಯಾಗಿದ್ದರೆ, ಇದೀಗ ವೇಗದಲ್ಲಿ ಮುನ್ನಡೆದು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ವನ್ನು ಸ್ವಾಭಿಮಾನದ ಕಡೆಗೆ ಕೊಂಡೊಯ್ಯುವಲ್ಲಿ ಪ್ರಧಾನಿ ಮೋದಿ ಅವರು ಯಶಸ್ವಿಯಾಗಿದ್ದಾರೆ ಎಂದರು.

ADVERTISEMENT

ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋ ಚನಾ ಜಿ. ಕೆ. ಭಟ್, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ ಮತ್ತಿತರರು ಮಾತನಾಡಿದರು.  ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿ. ಆನಂದ, ಪ್ರಮುಖರಾದ ಬಿ.ರಾಮದಾಸ್ ಬಂಟ್ವಾಳ, ಬಿ.ದಿನೇಶ ಭಂಡಾರಿ, ಮೋನಪ್ಪ ದೇವಸ್ಯ, ಸುದ ರ್ಶನ್, ಉಸ್ಮಾನ್ ಪಾಣೆಮಂಗಳೂರು, ಪುಷ್ಪರಾಜ್ ಚೌಟ, ಜನಾರ್ದನ ಬೊಂಡಾಲ, ಮಹಾಬಲ ಶೆಟ್ಟಿ, ರೊನಾಲ್ಡ್ ಡಿಸೋಜ, ಮಹೇಶ್ ಶೆಟ್ಟಿ ಬ್ರಹ್ಮರಕೂಟ್ಲು, ಪುರುಷೋತ್ತಮ ಶೆಟ್ಟಿ ವಾಮದಪದವು, ಸುಗುಣ ಕಿಣಿ, ಮಚ್ಚೆಂದ್ರ ಸಾಲ್ಯಾನ್, ಪ್ರಮೋದ್ ಕುಮಾರ್, ಮನೋಜ್ ಬ್ರಹ್ಮರಕೂಟ್ಲು, ಗಂಗಾಧರ ಕೋಟ್ಯಾನ್ , ಸೀತಾರಾಮ ಸಜೀಪ, ಗಣೇಶ್ದಾಸ್, ವಸಂತ ಕುಮಾರ್ ಅಣ್ಣಳಿಕೆ, ಎಂ.ದುರ್ಗಾಾದಾಸ್ ಶೆಟ್ಟಿ, ಸಂತೋಷ್ ಕುಮಾರ್ ಬೆಟ್ಟು, ಹರೀಶ ಆಚಾರ್ಯ ರಾಯಿ, ಕಿಶೋರ್ ಶೆಟ್ಟಿ ಅಂತರ, ದಿವಾಕರ ಶಂಭೂರು, ರಮಾ ನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ ರೈ, ತನಿಯಪ್ಪ ಗೌಡ, ಜಗದೀಶ ಭಂಡಾರಿ, ಗೋಪಾಲ ಸುವರ್ಣ, ಜಿನೇಂದ್ರ ಜೈನ್, ಗುರುದತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.