ADVERTISEMENT

ರೈತರಿಗೆ ಕಡಿಮೆ ದರದಲ್ಲಿ ರಸಗೊಬ್ಬರ ಪೂರೈಕೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2017, 3:14 IST
Last Updated 19 ನವೆಂಬರ್ 2017, 3:14 IST

ಉಜಿರೆ: ‘ಹೊಸ ಕಾರ್ಖಾನೆಯನ್ನು ಆರಂಭಿಸಿ ರೈತರಿಗೆ ಸಹಕಾರಿ ಸಂಘಗಳ ಮೂಲಕ ಕಡಿಮೆ ದರದಲ್ಲಿ ರಸಗೊಬ್ಬರ ಪೂರೈಕೆ ಮಾಡಲಾಗುವುದು’ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು. ಉಜಿರೆಯಲ್ಲಿ ಶನಿವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸರ್ಕಾರ ಸೂಕ್ತ ಬೆಲೆ ನೀಡಬೇಕು’ ಎಂದು ಒತ್ತಾಯಿಸಿದ ಅವರು ‘ನವೋ ದಯ ಸ್ವ-ಸಹಾಯ ಗುಂಪುಗಳ ಎಲ್ಲಾ ಸದಸ್ಯರಿಗೆ ಉಚಿತವಾಗಿ ಸಮವಸ್ತ್ರ ವಿತ ರಿಸಲಾಗುವುದು’ ಎಂದು ಪ್ರಕಟಿಸಿದರು.

‘ಸಾಲ ಮನ್ನಾ ಯೋಜನೆಯಂತೆ ಜಿಲ್ಲೆಗೆ ₹101 ಕೋಟಿ ಬಿಡುಗಡೆ ಯಾಗಿದೆ. ಆದರೆ, ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದವರು ಅವಕಾಶ ದಿಂದ ವಂಚಿತರಾಗುತ್ತಿದ್ದಾರೆ’ ಎಂದು ವಿಷಾದ ವ್ಯಕ್ತ ಪಡಿಸಿದರು.

ADVERTISEMENT

‘ನಾನು ರಾಜಕೀಯ ಪ್ರವೇಶಿಸು ವುದಿಲ್ಲ. ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸೇವೆ ಮಾಡಿ ಜನರ ಪ್ರೀತಿ-ವಿಶ್ವಾಸಕ್ಕೆ ಪಾತ್ರನಾ ಗಲು ಹಾಗೂ ಸಮಾಜದ ಋಣ ತೀರಿ ಸಲು ಉತ್ತಮ ಅವಕಾಶವಿದೆ. ನನ್ನ ಸಾಧನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪ್ರೋತ್ಸಾ ಹವೇ ಕಾರಣ’ ಎಂದು ಹೇಳಿದರು.

ಶಾಸಕ ಕೆ. ವಸಂತ ಬಂಗೇರ ಮತ್ತು ಸುಜಿತಾ ವಿ. ಬಂಗೇರ ಅವರನ್ನೂ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಕೃತಜ್ಞತೆ ವ್ಯಕ್ತ ಪಡಿಸಿದ ಬಂಗೇರ ತಾಲ್ಲೂಕಿನ ಪ್ರಗತಿಗೆ ಇನ್ನೂ ಹೆಚ್ಚಿನ ಶ್ರಮ ವಹಿಸುವುದಾಗಿ ಭರವಸೆ ನೀಡಿದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅಭಿನಂದನಾ ಭಾಷಣ ಮಾಡಿ, ಎಂ. ಎನ್.ರಾಜೇಂದ್ರ ಕುಮಾರ್ ಮತ್ತು ಶಾಸಕ ಬಂಗೇರ ಅವರ ಸೇವಾ ವೈಖರಿ ಯನ್ನು ಶ್ಲಾಘಿಸಿ ಅಭಿನಂದಿಸಿದರು.ಸುಂದರ ಗೌಡ ಇಚ್ಛಿಲ ಸ್ವಾಗತಿಸಿದರು. ನಿರಂಜನ ಬಾವಂತಬೆಟ್ಟುವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.