ADVERTISEMENT

‘ಸಂಘ ಪರಿವಾರದಿಂದ ಬೆಂಕಿ ಕೊಡುವ ಯತ್ನ’

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2017, 8:46 IST
Last Updated 20 ಸೆಪ್ಟೆಂಬರ್ 2017, 8:46 IST
ಪುತ್ತೂರಿನ ಬಸ್ ನಿಲ್ದಾಣದ ಬಳಿ ಎಸ್‌ಡಿಪಿಐ ವತಿಯಿಂದ ಮಂಗಳವಾರ ಸಂಜೆ ನಡೆದ ಪ್ರತಿಭಟನೆಯಲ್ಲಿ ಅಲ್ ಇಂಡಿಯಾ ಇಮಾಮ್ ಕೌನ್ಸಿಲ್‌ನ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ ಮಾತನಾಡಿದರು.
ಪುತ್ತೂರಿನ ಬಸ್ ನಿಲ್ದಾಣದ ಬಳಿ ಎಸ್‌ಡಿಪಿಐ ವತಿಯಿಂದ ಮಂಗಳವಾರ ಸಂಜೆ ನಡೆದ ಪ್ರತಿಭಟನೆಯಲ್ಲಿ ಅಲ್ ಇಂಡಿಯಾ ಇಮಾಮ್ ಕೌನ್ಸಿಲ್‌ನ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ ಮಾತನಾಡಿದರು.   

ಪುತ್ತೂರು: ಜಿಲ್ಲೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್, ಸಂಸದರಾದ ಶೋಭಾ ಕರಂ ದ್ಲಾಜೆ , ನಳಿನ್‌ಕುಮಾರ್ ಕಟೀಲು, ಕೋಮು ಪ್ರಚೋದನಾಕಾರಿ ಭಾಷಣ ಮಾಡಿ ಗಲಭೆ ಹರಡುವ ಕೆಲಸ ಮಾಡುತ್ತಿದ್ದಾರೆ. ಇದು ಸಾಕಾಗದ್ದಕ್ಕೆ ಉತ್ತರ ಕರ್ನಾಟಕದಿಂದ ಜಗದೀಶ್ ಕಾರಂತ ಅವರನ್ನು ಕರೆತಂದು, ಜಿಲ್ಲೆಗೆ ಬೆಂಕಿ ಕೊಡುವ ಪ್ರಯತ್ನವನ್ನು ಬಿಜೆಪಿ, ಸಂಘ ಪರಿವಾರದವರು ಮಾಡುತ್ತಿದ್ದಾರೆ ಎಂದು ಅಲ್ ಇಂಡಿಯಾ ಇಮಾಮ್ ಕೌನ್ಸಲ್‌ನ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ ಆರೋಪಿಸಿದರು.

ಹಿಂದೂ ಜಾಗರಣಾ ವೇದಿಕೆ ಪುತ್ತೂರು ತಾಲ್ಲೂಕು ಸಮಿತಿಯವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಮಂಗಳವಾರ ಸಂಜೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ಎಸ್‌ಡಿಪಿಐ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಪೊಲೀಸ್ ಅಧಿಕಾರಿಯೊಬ್ಬರು ತಪ್ಪು ಮಾಡಿದರೆ ಪ್ರತಿಭಟನೆ ಮಾಡಬ ಹುದು. ಆದರೆ ಪ್ರತಿಭಟನೆಯ ಹೆಸರಿನಲ್ಲಿ ವ್ಯಕ್ತಿಯ ತೇಜೋವಧೆ, ಸಮುದಾಯದ ಮತ್ತು ಧರ್ಮದ ಹಾಗೂ ಸರ್ಕಾರಿ ಕರ್ತವ್ಯದ ನಿಂದ ನೆಯನ್ನು ಸಂಘ ಪರಿವಾರದ ಭಾಷ ಣಕಾರರು ಮಾಡಿದ್ದಾರೆ. ಸರ್ಕಾರಿ ಏಜೆನ್ಸಿಗಳು ಆ ಕಾರ್ಯಕ್ರಮವನ್ನು ವೀಕ್ಷಿಸಿದ್ದರೂ, ಇಲ್ಲಿಯವರೆಗೆ ಭಾಷಣ ಮಾಡಿದವರನ್ನು ಬಂಧಿಸುವ ಕೆಲಸ ಮಾಡಿಲ್ಲ, ಕಾನೂನು ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು.

ADVERTISEMENT

ಸಾರ್ವಜನಿಕವಾಗಿ, ಪೊಲೀಸ್ ಅಧಿಕಾರಿಗಳ ಮುಂದೆಯೇ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ ಅವರು, ಸರ್ಕಾರಕ್ಕೆ ಮತ್ತು ಪೊಲೀಸ್ ಇಲಾಖೆಗೆ ಸವಾಲು ಹಾಕಿದ್ದಾರೆ. ಪೊಲೀಸ್ ಇಲಾಖೆಗೆ ಈ ತನಕ ಅವರ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಈ ಸವಾಲನ್ನು ಎದುರಿಸಲು ಸರ್ವ ಮಾನವರು ಸಿದ್ಧರಾಗಿದ್ದಾರೆ. ಗಲಭೆ ತಡೆಯಲು ಹಾಗೂ ಪ್ರತಿರೋಧಿಸಲು ನಾವು ಸಿದ್ಧರಾಗಿದ್ದೇವೆ ಎಂದು ಹೇಳಿದರು.

ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಳ್ಳಲು ಕಾನೂನು ವ್ಯವಸ್ಥೆಯಲ್ಲಿ ಅವಕಾಶಗಳಿದ್ದರೂ, ಕೇಸ್‌ ದಾಖಲಿಸಿಕೊಂಡು ಅವರನ್ನು ಬಂಧಿಸಲು ಸಾಧ್ಯವಾಗಿಲ್ಲ. ಕೇಸ್‌ ದಾಖಲಿಸಿಕೊಳ್ಳಲು ದೂರು ಕೊಟ್ಟಿಲ್ಲ ಎಂದು ಪೊಲೀಸ್ ಇಲಾಖೆಯ ಅಧಿಕಾ ರಿಗಳು ಹೇಳುತ್ತಿರುವುದು ನಾಚಿಕೆಯ ವಿಷಯ ಎಂದರು.

ಎಸ್‌ಡಿಪಿಐ ಪುತ್ತೂರು ಜಿಲ್ಲಾ ಘಟಕದ ಉಪಾಧ್ಯಕ್ಷ ಸಿದ್ದೀಕ್ ಪುತ್ತೂರು ಮಾತನಾಡಿ, ಪುತ್ತೂರಿನಲ್ಲಿ ಶಾಂತಿಯುತ ವಾತಾವರಣವಿದ್ದು, ಕೋಮು ಪ್ರಚೋದನಾಕಾರಿ ಕೆಲಸ ಮಾಡುತ್ತಿರುವವರನ್ನು ಪುತ್ತೂರಿ ನಿಂದಲೇ ಓಡಿಸಬೇಕು ಎಂದರು.

ಎಸ್‌ಡಿಪಿಐ ರಾಜ್ಯ ಘಟಕದ ಕಾರ್ಯ ದರ್ಶಿ ಅಬ್ದುಲ್ ಲತೀಫ್, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಕಾರ್ಯ ದರ್ಶಿ ಶಾಬೀರ್ ಅರಿಯಡ್ಕ, ತಾಲ್ಲೂಕು ಉಪಾಧ್ಯಕ್ಷ ಇಬ್ರಾಹಿಂ ಸಾಗರ್, ಪ್ರಮುಖ ಎಂ.ಎ.ರಫೀಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.