ADVERTISEMENT

ಸಮ್ಮೇಳನಾಧ್ಯಕ್ಷೆಯಾಗಿ ಚಂದ್ರಕಲಾ ಆಯ್ಕೆ

ಜ. 7ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 5 ಜನವರಿ 2017, 6:05 IST
Last Updated 5 ಜನವರಿ 2017, 6:05 IST

ಮಂಗಳೂರು: ಮಂಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಇದೇ 7ರಂದು ಗುರುಪುರದ ಕುಕ್ಕುದಕಟ್ಟೆಯ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ಪ್ರಾಂಶುಪಾಲೆ, ಹಿರಿಯ ಸಾಹಿತಿ ಚಂದ್ರಕಲಾ ನಂದಾ ವರ ಅವರು ಸಮ್ಮೇಳನಾಧ್ಯಕ್ಷೆಯಾಗಿ ಆಯ್ಕೆಯಾ ಗಿದ್ದು, ಸಮ್ಮೇಳನದ ಕಾರ್ಯ ಕಲಾಪಗಳನ್ನು ನಡೆಸುವರು ಎಂದು ಹೇಳಿದರು.

ಅಂದು ಬೆಳಿಗ್ಗೆ 8.30ಕ್ಕೆ ಕನ್ನಡ ಭುವ ನೇಶ್ವರಿಯ ದಿಬ್ಬಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಗುರು ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕಿಯಾ ಅವರು ಮೆರವ ಣಿಗೆಗೆ ಚಾಲನೆ ನೀಡುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್‌.ಜಿ. ಸಿದ್ದರಾಮಯ್ಯ ಅವರು ಸಮ್ಮೇಳನ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಸದಸ್ಯ ಯು.ಪಿ. ಇಬ್ರಾಹಿಂ ಅವರು ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸುವರು ಎಂದು ಹೇಳಿದರು.

ಬೆಳಿಗ್ಗೆ 11. 30ಕ್ಕೆ ಅಡ್ಡೂರು ಸಹರಾ ಇಂಗ್ಲಿಷ್‌ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 11.45ಕ್ಕೆ ‘ಇತಿಹಾಸ–ವರ್ತಮಾನ’ ವಿಷಯದ ಕುರಿತು ಅವಲೋಕನ ನಡೆ ಯಲಿದೆ. ಮಧ್ಯಾಹ್ನ 1.45ಕ್ಕೆ ಪಾಂಪೈ ಚರ್ಚ್‌ನ ಧರ್ಮಗುರು ಫಾದರ್‌ ಆ್ಯಂಟನಿ ಲೋಬೊ ಅವರ ಉಪಸ್ಥಿತಿ ಯಲ್ಲಿ ‘ವಿದ್ಯಾರ್ಥಿ ಕವಿಗೋಷ್ಠಿ’ ಕಾರ್ಯ ಕ್ರಮ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ‘ಚತುಭಾಷಾ ಕವಿಗೋಷ್ಠಿ’ ನಡೆಯಲಿದೆ ಎಂದು ಹೇಳಿದರು.

ಸಂಜೆ 4ಕ್ಕೆ ಸಮ್ಮೇಳನದ ಸಮಾ ರೋಪ ಸಮಾರಂಭ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿ ಷತ್‌ನ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಅವರು ಅಧ್ಯಕ್ಷತೆ ವಹಿಸುವರು. ಸುದ್ದಿಗೋಷ್ಠಿಯಲ್ಲಿ ದೇವಕಿ, ವಿಜಯ ಲಕ್ಷ್ಮೀ ಶೆಟ್ಟಿ, ತಮ್ಮಯ್ಯ, ಸತೀಶ್‌, ಅರುಣಾ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT