ADVERTISEMENT

ಸರ್ಕಾರಿ ಕಟ್ಟಡಗಳಿಗೆ ಹೊಸ ರೂಪ: ಚಿಂತನೆ

ಬಂಟ್ವಾಳ: ಬೂಡ ಅಧ್ಯಕ್ಷ ಸದಾಶಿವ ಬಂಗೇರ ಪದಗ್ರಹಣ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2017, 6:36 IST
Last Updated 28 ಮಾರ್ಚ್ 2017, 6:36 IST
ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುವ ಸರ್ಕಾರಿ ಕಟ್ಟಡ ಗಳು ಹಳೆದ ಗೋದಾಮು ಮಾದರಿಗೆ ಬದಲಾಗಿ ಹೊಸ ರೂಪ ನೀಡುವ ಮೂಲಕ ಆಕರ್ಷಕ ಮತ್ತು ಸುಂದರ ವಾಗಿ ನಿರ್ಮಿಸಲು ನಗರಾಭಿವೃದ್ಧಿ ಪ್ರಾಧಿ ಕಾರ ಎಂಜಿನಿಯರ್ ಮತ್ತು ಅಧಿಕಾರಿಗಳು ಶ್ರಮಿಸಬೇಕು ಎಂದು ನಗರಾ ಭಿವೃದ್ಧಿ ಪ್ರಾಧಿಕಾರ (ಬೂಡ) ನೂತನ ಅಧ್ಯಕ್ಷ ಸದಾಶಿವ ಬಂಗೇರ ಹೇಳಿದ್ದಾರೆ.
 
ಇಲ್ಲಿನ ಪುರಸಭೆಯಲ್ಲಿ ಬೂಡ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿ ದರು. ಈಗಾಗಲೇ ಪುರಸಭಾ ವ್ಯಾಪ್ತಿ ಯಲ್ಲಿ ಕೆರೆ ಒತ್ತುವರಿ ತೆರವುಗೊಳಿಸಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆಯೂ ಗಮನ ಹರಿಸುವುದಾಗಿ ತಿಳಿಸಿದ ಅವರು ಪುರಸಭಾಧ್ಯಕ್ಷರೊಂದಿಗೆ ಕೈ ಜೋಡಿ ಸಿಕೊಂಡು ಸಮಗ್ರ ಅಭಿವೃದ್ಧಿಗೆ ಶ್ರಮಿಸು ವುದಾಗಿ ತಿಳಿಸಿದರು.
 
ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಟ್ವಾಳ ಪುರಸಭೆಯ ಅಭಿವೃ ದ್ಧಿಗಾಗಿ ನಾವಿಬ್ಬರೂ ಪರಸ್ಪರ ಭಿನ್ನಾಭಿ ಪ್ರಾಯ ಮರೆತು ಕೋಟಿ ಚೆನ್ನಯ್ಯರಂತೆ ದುಡಿಯುವುದಾಗಿ  ಘೋಷಿಸಿದರು. 
 
ಬೂಡಾ ನಿಕಟ ಪೂರ್ವ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಅವರು ಅಧಿಕಾರ ಹಸ್ತಾಂತರಿಸಿ ಮಾತನಾಡಿ, ಯಾವುದೇ ಕಟ್ಟಡಗಳನ್ನು ನಿರ್ಮಿಸುವ ಮೊದಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದರು.
 
ಜಿಲ್ಲಾ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಜಿಲ್ಲಾ ಪಂಚಾ ಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ಶಾಹುಲ್ ಹಮೀದ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ ಶುಭ ಹಾರೈಸಿದರು.

ಜಪಂ ಸದಸ್ಯರಾದ ಪದ್ಮಶೇ ಖರ್ ಜೈನ್, ಶಾಹುಲ್ ಹಮೀದ್, ರವೀಂದ್ರ ಕಂಬಳಿ, ಮಂಜುಳಾ ಮಾವೆ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿ ಲಪ್ಪ ಸಾಲ್ಯಾನ್, ಕಾಂಗ್ರೆಸ್ ಮುಖಂಡ ಹರಿಕೃಷ್ಣ ಬಂಟ್ವಾಳ, ತಾಲ್ಲೂಕು ಪಂಚಾ ಯಿತಿ ಸದಸ್ಯರಾದ ಸಂಜೀವ ಪೂಜಾರಿ, ಪ್ರಭಾಕರ ಪ್ರಭು, ಕುಮಾರ ಭಟ್, ಎಪಿ ಎಂಸಿ ಉಪಾಧ್ಯಕ್ಷ ಚಂದ್ರಶೇಖರ್ ಪೂಜಾರಿ, ಪುರಸಭಾ ಸದಸ್ಯರಾದ ಎ.ಗೋವಿಂದ ಪ್ರಭು, ಬಿ.ದೇವದಾಸ ಶೆಟ್ಟಿ, ಸುಗುಣ ಕಿಣಿ, ಮುನೀಶ್ ಅಲಿ, ಬಿ.ಮೋಹನ್, ವಾಸು ಪೂಜಾರಿ, ಪ್ರವೀಣ್ ಬಿ., ಗಂಗಾಧರ ಪೂಜಾರಿ, ವಸಂತಿ ಚಂದಪ್ಪ, ಯಾಸ್ಮಿನ್, ಚಂಚ ಲಾಕ್ಷಿ, ಪ್ರಭಾ ಆರ್. ಸಾಲ್ಯಾನ್, ಮುಹಮ್ಮದ್ ನಂದಾವರ ಮತ್ತಿತರರು ಇದ್ದರು.
***
ಈಗಾಗಲೇ ಪುರಸಭಾ ವ್ಯಾಪ್ತಿಯಲ್ಲಿ ಕೆರೆ ಒತ್ತುವರಿ ತೆರವುಗೊಳಿಸಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆಯೂ ಗಮನ ಹರಿಸಲಾಗುವುದು.
ಸದಾಶಿವ ಬಂಗೇರ, ಬೂಡ ನೂತನ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.