ADVERTISEMENT

29ರಂದು ಬೃಹತ್ ಸಮಾವೇಶ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2017, 6:37 IST
Last Updated 21 ಏಪ್ರಿಲ್ 2017, 6:37 IST

ಮಂಗಳೂರು: ಜಿಲ್ಲಾ ಆದಿದ್ರಾವಿಡ ಸೇವಾ ಸಂಘವು ದಶಮಾನೋತ್ಸವ ಸಂಭ್ರಮದಲ್ಲಿರುವ ಹಿನ್ನೆಲೆಯಲ್ಲಿ ಇದೇ 29ರಂದು ಬೃಹತ್ ಸಮಾವೇಶವನ್ನು ಬೆಳಿಗ್ಗೆ 10.30ಕ್ಕೆ ಮಂಗಳೂರು ನೆಹರು ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆದಿದ್ರಾವಿಡ  ಸಮಾಜ ಸೇವಾ ಸಂಘದ ವಕ್ತಾರ ರಾಮ ಕುಮಾರ್ ಪಿ. ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಆದಿದ್ರಾವಿಡ ಸಮುದಾಯದ ಜನರ ಸ್ಥಿತಿಗತಿ ಹಾಗೂ  ಸಮಸ್ಯೆಗಳ ಕುರಿತು ಪ್ರಮುಖ ಬೇಡಿಕೆಗಳ ಹಕ್ಕೊತ್ತಾಯ ವನ್ನು ಸಚಿವರು ಹಾಗೂ ಜನಪ್ರತಿನಿ ಧಿಗಳ ಮೂಲಕ ಸರ್ಕಾರಕ್ಕೆ ಮಂಡಿಸ ಲಾಗುವುದು. ಕಾರ್ಯಕ್ರಮದ ಉದ್ಘಾಟ ನೆಯನ್ನು ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾಸಂಘದ ಗೌರವಾಧ್ಯಕ್ಷ ಶೇಖರ್ ಬಳ್ಳಾಲ್‌ಬಾಗ್ ನೆರವೇರಿಸಲಿದ್ದಾರೆ. ಮೈಸೂರು ಬಸವಧ್ಯಾನ ಮಂದಿರದ ಬಸವಲಿಂಗ ಮೂರ್ತಿ ಸ್ವಾಮೀಜಿ ಹಾಗೂ ಈಶ ವಿಠಲದಾಸ ಸ್ವಾಮೀಜಿ ಆಶೀರ್ವ ಚನ ನೀಡಲಿದ್ದಾರೆ.

ಅಧ್ಯಕ್ಷತೆಯನ್ನು ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ಮೋಹನ್ ನೆಲ್ಲಿಗುಂಡಿ ವಹಿಸಿಕೊಳ್ಳಲಿದ್ದಾರೆ. ಗೃಹಸಚಿವ ಡಾ.ಜಿ. ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌. ಆಂಜನೇಯ, ರಾಜ್ಯ ಜನತಾದಳ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸೇರಿ ದಂತೆ ಇನ್ನಿತರ ರಾಜಕೀಯ ನಾಯಕರು ಗಳು, ಜನಪ್ರತಿನಿಧಿಗಳು ಭಾಗವಹಿಸಲಿ ದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಪ್ರಧಾನ ಕಾರ್ಯ ದರ್ಶಿ ಸಂಜೀವ ಕೋಟ್ಯಾನ್  ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.