ADVERTISEMENT

ಬಿಸೆನೆಸ್ ಇಂಗ್ಲಿಷ್ ಸರ್ಟಿಫಿಕೇಟ್ ಪರೀಕ್ಷೆ:ಆಳ್ವಾಸ್‌ಗೆ ಶೇಕಡಾ 100 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 16 ಜುಲೈ 2018, 15:27 IST
Last Updated 16 ಜುಲೈ 2018, 15:27 IST

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ನಡೆಸುವ ಕೇಂಬ್ರಿಡ್ಜ್ ಇಂಗ್ಲೀಷ್ ಲ್ಯಾಂಗ್ವೇಜ್ ಅಸೆಸ್‌ಮೆಂಟ್ ಪರೀಕ್ಷೆ ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಶೇಕಡಾ 100 ಫಲಿತಾಂಶ ಗಳಿಸಿದ್ದಾರೆ.

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪದವಿ ಕಾಲೇಜಿನ 162 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿ, ಯಶಸ್ವಿಯಾಗಿದ್ದಾರೆ. ಆಳ್ವಾಸ್ ಪದವಿ ಕಾಲೇಜು ಸತತ ಎರಡನೆ ಬಾರಿಗೆ ಶೇಕಡಾ 100ರಷ್ಟು ಫಲಿತಾಂಶವನ್ನು ಪಡೆದ ತರಬೇತಿ ಕೇಂದ್ರವಾಗಿದೆ. ಕೇಂಬ್ರಿಡ್ಜ್ ಇಂಗ್ಲೀಷ್ ಲ್ಯಾಂಗ್ವೇಜ್ ಆ್ಯಸೆಸ್ಮೆಂಟ್ ಪರೀಕ್ಷೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಷ್ಠಿತ ಪರೀಕ್ಷೆಯಾಗಿದೆ.

ವಿಫುಲ ಉದ್ಯೋಗ ಅವಕಾಶ ಪಡೆಯಲು, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಳ್ಳಲು ಸಹಕಾರಿಯಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅದ್ಯಕ್ಷ ಡಾ ಎಂ. ಮೋಹನ ಆಳ್ವ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.