ಪ್ರಜಾವಾಣಿ ವಾರ್ತೆ
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತದ ಚಾರಣಕ್ಕೆ ಅ.3ರಿಂದ ನಿರ್ಬಂಧ ವಿಧಿಸಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂದಿನ ಆದೇಶದವರೆಗೆ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮೇ ತಿಂಗಳಿನಿಂದ ಸೆ.29ರವರೆಗೆ ಅರಣ್ಯ ಇಲಾಖೆಯು ಕುಮಾರಪರ್ವತ ಚಾರಣಕ್ಕೆ ನಿರ್ಬಂಧ ವಿಧಿಸಿತ್ತು. ಶನಿವಾರದಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಅವಕಾಶ ನೀಡಿದ್ದರಿಂದ ಶನಿವಾರ, ಭಾನುವಾರ ಭಾರಿ ಸಂಖ್ಯೆಯಲ್ಲಿ ಚಾರಣಿಗರು ಬಂದಿದ್ದರು. ಭಾರಿ ಮಳೆಯಿಂದಾಗ ಚಾರಣ ಕಷ್ಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.