ADVERTISEMENT

ಕರಾವಳಿಯಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2018, 13:24 IST
Last Updated 7 ಜುಲೈ 2018, 13:24 IST
   

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಮುನ್ನೆಚ್ಚರಿಕೆ ನೀಡಿದೆ.

ಮಳೆ ಹಾನಿ, ಪ್ರವಾಹ ಪರಿಸ್ಥಿತಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಕುರಿತು ಮಾಹಿತಿ ನೀಡಿದರು.

'ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಜುಲೈ 11ರವರೆಗೂ ಭಾರಿ ಮಳೆ ಬೀಳಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿದಿನ 160 ಮಿಲಿ ಮೀಟರ್ ಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ' ಎಂದರು.

ADVERTISEMENT

ನಾಲ್ಕು ದಿನಗಳ ಕಾಲ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪ‌ಂಚಾಯತ್ ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕಾರ್ಯಸ್ಥಾನ ಬಿಡಬಾರದು. ಸಂಭವನೀಯ ಪ್ರವಾಹ ಪ್ರದೇಶಗಳ ಪಟ್ಟಿ ಸಿದ್ಧಪಡಿಸಿ, ಪರಿಹಾರ ಕಾರ್ಯಾಚರಣೆಗೆ ಕ್ರಿಯಾಯೋಜನೆ ರೂಪಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.