ADVERTISEMENT

‘ಆರುಷಿ ಯೋಜನೆ ಜಾರಿಗೆ ಆರೋಗ್ಯ ಸಚಿವ ಭರವಸೆ’

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2017, 6:58 IST
Last Updated 24 ನವೆಂಬರ್ 2017, 6:58 IST

ಹೊನ್ನಾಳಿ: ‘ರಾಜ್ಯದಲ್ಲಿ ಆರುಷಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭರವಸೆ ನೀಡಿದ್ದಾರೆ’ ಎಂದು ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣ ಮತ್ತು ಮಕ್ಕಳ ಹಕ್ಕು ರಕ್ಷಣೆಯ ಕಾರ್ಯಕರ್ತ ಎಂ.ಜೆ. ಚನ್ನೇಶ್ ತಿಳಿಸಿದ್ದಾರೆ.

ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಬೆಳಗಾವಿಯಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ಅವರು ಬುಧವಾರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾರದಾ, ರೈತ ಮುಖಂಡ ಬಸವರಾಜಪ್ಪ, ಹೊಳೆಹರಳಹಳ್ಳಿ ಬಸವರಾಜಪ್ಪ, ಕೆ.ಜಿ. ಷಣ್ಮುಖಪ್ಪ ಹಾಜರಿದ್ದರು.

ಗರ್ಭಿಣಿಯ ಹೆಸರು ನೋಂದಾಯಿಸಬೇಕು ಮತ್ತು ಆರುಷಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ಎಂ.ಜೆ.ಚನ್ನೇಶ್‌ ಹೋರಾಟ ಮಾಡುತ್ತಿದ್ದಾರೆ. ಈಚೆಗೆ ಹೊನ್ನಾಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿ ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.