ADVERTISEMENT

ಗೌರಿ ಹತ್ಯೆ ಖಂಡಿಸಿ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 9:19 IST
Last Updated 22 ಸೆಪ್ಟೆಂಬರ್ 2017, 9:19 IST
ಮಲೇಬೆನ್ನೂರಿನ ಕರ್ನಾಟಕ ನೀರಾವರಿ ನಿಗಮದ ವಿವಿಧ ಉಪ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸೌಡಿಗಳು ವೇತನ ಬಿಡುಗಡೆಗೆ ಆಗ್ರಹಿಸಿ ಗುರುವಾರ ಧರಣಿ ನಡೆಸಿದರು.
ಮಲೇಬೆನ್ನೂರಿನ ಕರ್ನಾಟಕ ನೀರಾವರಿ ನಿಗಮದ ವಿವಿಧ ಉಪ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸೌಡಿಗಳು ವೇತನ ಬಿಡುಗಡೆಗೆ ಆಗ್ರಹಿಸಿ ಗುರುವಾರ ಧರಣಿ ನಡೆಸಿದರು.   

ಹರಿಹರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗಿರಿಯಮ್ಮ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಸಿಬ್ಬಂದಿ ಗುರುವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.

ಕಾಲೇಜಿನ ಆವರಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಶಿವಮೊಗ್ಗ ರಸ್ತೆ, ರಾಣಿ ಚೆನ್ನಮ್ಮ ವೃತ್ತ, ಮುಖ್ಯ ರಸ್ತೆ ಮೂಲಕ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡಿತು. ಪ್ರತಿಭಟನಾಕಾರರು ಅಲ್ಲಿ ಮಾನವ ಸರಪಳಿ ರಚಿಸಿದರು.

ಗೌರಿ ಲಂಕೇಶ್ ಹತ್ಯೆ ಪ್ರಜಾಪ್ರಭುತ್ವದ ಕಗ್ಗೊಲೆ. ವಿಚಾರಗಳನ್ನು ಬಂದೂಕಿನಿಂದ ಹತ್ತಿಕ್ಕುವುದು ನಿಲ್ಲಬೇಕು. ಈ ಕೃತ್ಯ ಎಸಗಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಜಿ. ನಳಿನಾ ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ಗಾಯಿತ್ರಿ, ರತ್ನಮ್ಮ, ನೇತ್ರಾವತಿ, ಶಕುಂತಲಮ್ಮ, ಸವಿತಾ, ತಾರಾ, ಶ್ವೇತಾ, ಸಂಗೀತಾ, ಸವಿತಾ ಎಂ.ಎಸ್. ಬಸಮ್ಮ, ರೂಪಾ, ಪ್ರಿಯಾಂಕಾ, ಕಾವ್ಯಾ, ಮೇಘನಾ ಹಾಗೂ ಸಂತೃಪ್ತಿ ಅವರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.