ADVERTISEMENT

ಜಿಲ್ಲೆಯಲ್ಲಿ 7.32 ಲಕ್ಷ ಸಸಿ ಪೋಷಣೆ

ಸಾಮಾಜಿಕ ಅರಣ್ಯ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸಲು ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 27 ಮೇ 2018, 8:49 IST
Last Updated 27 ಮೇ 2018, 8:49 IST
ಜಿಲ್ಲೆಯಲ್ಲಿ 7.32 ಲಕ್ಷ ಸಸಿ ಪೋಷಣೆ
ಜಿಲ್ಲೆಯಲ್ಲಿ 7.32 ಲಕ್ಷ ಸಸಿ ಪೋಷಣೆ   

ದಾವಣಗೆರೆ: ಅರಣ್ಯ ಇಲಾಖೆ ಈ ಬಾರಿ ಸಾಮಾಜಿಕ ಅರಣ್ಯೀಕರಣ ಯೋಜನೆಯಡಿ ಜಿಲ್ಲೆಯಲ್ಲಿ 7.32 ಲಕ್ಷ ಸಸಿಗಳ ಪೋಷಣೆ ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಅಶ್ವತಿ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯ್ತಿ ಸಮೀಪದ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಶನಿವಾರ ಸಸಿಗಳ ವಿತರಣೆ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ತೇಗ, ಸಿಲ್ವರ್ ಓಕ್, ನಿಂಬೆ, ಶ್ರೀಗಂಧ, ಹೆಬ್ಬೇವು, ಕರಿಬೇವು, ಬನ್ನಿ, ಬಿಲ್ವಪತ್ರೆ, ಚರಿ, ಟೆಕೋಮ, ನುಗ್ಗೆ ಸಸಿಗಳನ್ನು ಬೆಳೆಸಲಾಗಿದೆ. ಈ ಬಾರಿಯ ಮಳೆಗಾಲದಲ್ಲಿ ರೈತರಿಗೆ, ಸಾರ್ವಜನಿಕರಿಗೆ, ಸರ್ಕಾರಿ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಸಸಿಗಳನ್ನು ವಿತರಣೆ ಮಾಡಲಾಗುವುದು. ಹಸಿರೀಕರಣಕ್ಕೆ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್‌, ಉದ್ಯೋಗ ಖಾತರಿ ಯೋಜನೆಯ ಮಾರ್ಗಸೂಚಿಗಳಂತೆ ಮತ್ತು ಆರ್‌ಎಸ್‌ಪಿಡಿ ಯೋಜನೆಯಡಿ ಇಲಾಖಾ ನಿಯಮಾದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸಸಿಗಳನ್ನು ವಿತರಿಸಲಾಗುವುದು. ಅರ್ಹ ಫಲಾನುಭವಿಗಳು ಆಯಾ ತಾಲ್ಲೂಕು ಕೇಂದ್ರ್ರಗಳಲ್ಲಿ ವಲಯ ಅರಣ್ಯಾಧಿಕಾರಿಗಳು, ಸಾಮಾಜಿಕ ಅರಣ್ಯ ವಲಯ ಕಚೇರಿಗಳಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ವಿವರ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಷಡಕ್ಷರಪ್ಪ, ಶ್ರೀನಿವಾಸ್‌ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.