ADVERTISEMENT

ದಿನೇಶ್‌ ಗುಂಡೂರಾವ್‌ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 16 ಮೇ 2017, 5:07 IST
Last Updated 16 ಮೇ 2017, 5:07 IST

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವಿಟರ್‌ ಮೂಲಕ ಅವಹೇಳನ ಕಾರಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ವರ್ತನೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಸೋಮವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

‘ದಿನೇಶ್‌ ಅವರು, ಪ್ರಧಾನಿ ಅವರಿಗೆ ಬಳೆಗಳನ್ನು ಕಳುಹಿಸಬೇಕು ಎಂದು ಹೇಳಿಕೆ ನೀಡಿರುವುದು ಸರಿಯಲ್ಲ. ಜತೆಗೆ ಮಹಿಳೆಯರನ್ನು ಅಬಲೆಯರು ಎಂದು ಕರೆದಿರುವುದು ಕೂಡ ಖಂಡನೀಯ.

ದಿನೇಶ್‌ ಅವರೇ ಸೀರೆಯನ್ನುಟ್ಟು ಬಳೆಗಳನ್ನು ತೊಡಬೇಕು’ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸಿ.ಶ್ರೀನಿವಾಸ್‌ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ವಜಾ ಮಾಡುವಂತೆ ಒತ್ತಾಯಿಸಿದರು.ಇದೇ ಸಮಯದಲ್ಲಿ ದಿನೇಶ್‌ ಗುಂಡೂರಾವ್‌ ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಅಣಬೇರು ಶಿವಪ್ರಕಾಶ್‌, ನರೇಶ್‌, ನೀಲಗುಂದ ರಾಜು, ಸೋಗಿ ಶಾಂತ ಕುಮಾರ್‌, ಶ್ರೀಕಾಂತ್‌, ಟಿಂಕರ್‌ ಮಂಜಣ್ಣ, ಅಶೋಕ ನಾಯ್ಕ, ದೇವಿರಮ್ಮ, ಜಗದೀಶ್‌, ಧನುಷ್‌, ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.