ADVERTISEMENT

ದುಗ್ಗಾವತಿ: ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ

​ಪ್ರಜಾವಾಣಿ ವಾರ್ತೆ
Published 21 ಮೇ 2017, 5:28 IST
Last Updated 21 ಮೇ 2017, 5:28 IST

ಹರಪನಹಳ್ಳಿ: ಎಲ್ಲಾ ಧರ್ಮ, ಸಮಾಜಗಳನ್ನು ರಾಜಕಾರಣಿಗಳು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಮಠಾಧೀಶರು ಜನರನ್ನು ಒಗ್ಗೂಡಿಸಿ ಸಮಾನತೆ ಹಾಗೂ ಶಾಂತಿ ಸ್ಥಾಪನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎಂ.ಪಿ.ರವೀಂದ್ರ ಹೇಳಿದರು.

ತಾಲ್ಲೂಕಿನ ದುಗ್ಗಾವತಿ ಗ್ರಾಮದಲ್ಲಿ ಶನಿವಾರ ಆಂಜನೇಯ ದೇಗುಲದ ಕಳಸಾರೋಹಣ, ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ, ಧಾರ್ಮಿಕ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭ ಮಾತನಾಡಿದ ಸ್ವಾಮೀಜಿ, ‘ಗ್ರಾಮಗಳಲ್ಲಿ ಸಹಬಾಳ್ವೆ ನಡೆಸಿದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿದೆ. ನಾವು ಪರೋಪಕಾರ ಮನೋಭಾವ ಬೆಳೆಸಿಕೊಳ್ಳಬೇಕು. ಬರದಲ್ಲೂ ಐತಿಹಾಸಿಕ ವೀರಾಂಜನೇಯ ದೇವಸ್ಥಾನದ ಗೋಪುರ ಹಾಗೂ ಕಳಸಾರೋಹಣ ಮಾಡಿರುವುದು ಪ್ರಶಂಸನೀಯ’ ಎಂದರು.

ADVERTISEMENT

ರಾಮಘಟ್ಟದ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ದಿಂಡಿಹಳ್ಳಿ ಪಶುಪತಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಆವರಗೊಳ್ಳದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಹಿರೇಕುರುವತ್ತಿ ಸಿದ್ದ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ವೀರಭದ್ರ ಸ್ವಾಮೀಜಿ, ಅಜ್ಜಯ್ಯ ಸ್ವಾಮೀಜಿ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಆರ್.ಈಶ್ವರಪ್ಪ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಮಂಜುಳಾ ಜಗದೀಶಗೌಡ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪುಷ್ಪಾ ರಾಜಕುಮಾರ, ಧರ್ಮದರ್ಶಿ ಕರೇಗೌಡ್ರ ನಿಂಗಪ್ಪ, ಕಾಂಗ್ರೆಸ್ ಮುಖಂಡರಾದ ದುಗ್ಗಾವತಿ ಮಂಜುನಾಥ, ಎಂ.ವಿ.ಅಂಜಿನಪ್ಪ, ವಾಗೀಶ, ನಂದೀಶ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.