ADVERTISEMENT

ರೈತರಿಗೆ ಕೊರತೆಯಾಗದಂತೆ ಬಿತ್ತನೆಬೀಜ ವಿತರಿಸಿ: ಶಾಸಕ ರಾಜೇಶ್‌

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2017, 9:23 IST
Last Updated 19 ಸೆಪ್ಟೆಂಬರ್ 2017, 9:23 IST

ಜಗಳೂರು: ಹಿಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್‌.ಪಿ. ರಾಜೇಶ್‌ ಸಲಹೆ ನಿಡಿದರು. ಪಟ್ಟಣದಲ್ಲಿ ಕೃಷಿ ಇಲಾಖೆಯಿಂದ ರಿಯಾಯ್ತಿ ದರದ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಂಗಾರಿನಲ್ಲಿ ಬಿತ್ತನೆ ಪ್ರಮಾಣ ಕಡಿಮೆಯಾಗಿದ್ದು, ಈಗ ಉತ್ತಮ ಮಳೆ ಬಿದ್ದಿರುವ ಕಾರಣ ಕಡಲೆ ಮತ್ತು ಬಿಳಿಜೋಳ ಬಿತ್ತನೆ ಬೀಜಕ್ಕೆ ರೈತರಿಂದ ಹೆಚ್ಚಿನ ಬೇಡಿಕೆ ಇದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ವಿತರಿಸಿ ಎಂದು ಸೂಚಿಸಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ. ಬಸಣ್ಣ ಮಾತನಾಡಿ, ತಾಲ್ಲೂಕಿನಲ್ಲಿ 2 ಸಾವಿರ ಕ್ವಿಂಟಲ್‌ ಕಡಲೆ ಬೀಜ ಬೇಡಿಕೆ ಇದೆ. ಈಗ 1500 ಕ್ವಿಂಟಲ್‌ ದಾಸ್ತಾನು ಇದೆ. ಅಗತ್ಯವಿದ್ದಲ್ಲಿ ಮತ್ತಷ್ಟು ಬೀಜ ವಿತರಣೆ ಮಾಡಲಾಗುವುದು. ಮಾಲ್ದಂಡಿ ಬಿಳಿಜೋಳ ಬೀಜ ಸಹ ವಿತರಿಸಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ತಾಲ್ಲೂಕು ಪಂಯ್ತಿ ಸದಸ್ಯ ಬಿದರಕೆರೆ ಬಸವರಾಜ್‌, ಕೃಷಿ ಅಧಿಕಾರಿ ಉಮೇಶ್‌, ಮುಖಂಡ ರಾಜು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.