ADVERTISEMENT

ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2017, 7:03 IST
Last Updated 24 ನವೆಂಬರ್ 2017, 7:03 IST
ಹರಪನಹಳ್ಳಿಯಲ್ಲಿ ಗುರುವಾರ ಕರ್ನಾಟಕ ಮಾದಿಗ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹರಪನಹಳ್ಳಿಯಲ್ಲಿ ಗುರುವಾರ ಕರ್ನಾಟಕ ಮಾದಿಗ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಹರಪನಹಳ್ಳಿ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಸಂಘದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆ ನಡೆಯಿತು.

ಬಳಿಕ ನಡೆದ ಧರಣಿಯಲ್ಲಿ ಮಂಜುನಾಥ್‌ ಕಣಿವಿಹಳ್ಳಿ, ಮಲ್ಲೇಶ್‌ ಮುಂತಾದ ಮುಖಂಡರು ಮಾತನಾಡಿ, ‘ರಾಜ್ಯದಲ್ಲಿ ಒಂದು ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿದ್ದು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಸಲ್ಲಿಸಿರುವ ವರದಿ ದೂಳು ತಿನ್ನುತ್ತಿದೆ. ಸಮಾನತೆ ಕುರಿತು ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಜಾರಿಗೆ ತರಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಟೀಕಿಸಿದರು.

ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿರುವ ಡಾ.ಜಿ.ಪರಮೇಶ್ವರ್‌, ಸಂಸದ ಮಲ್ಲಿಕಾರ್ಜುನ ಖರ್ಗೆ, ನರೇಂದ್ರ ಸ್ವಾಮಿ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದಲಿತರ ನೋವು ಗೊತ್ತಿಲ್ಲದ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಡಿ.11ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು ಸಮುದಾಯದವರು ಭಾಗವಹಿಸಬೇಕು ಎಂದು ತಿಳಿಸಿದರು. ತಹಶೀಲ್ದಾರ್‌ ಕೆ.ಗುರುಬಸವರಾಜ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡರಾದ ಡಿ.ಮಹಾಂತೇಶ್‌, ಕೆ.ರವಿಕುಮಾರ್‌, ಮಾರುತಿ, ನಿಂಗರಾಜ್‌, ರಾಜಪ್ಪ, ಶಶಿಕುಮಾರ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.