ADVERTISEMENT

ಸರ್ಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2017, 9:54 IST
Last Updated 17 ನವೆಂಬರ್ 2017, 9:54 IST
ಹೊನ್ನಾಳಿ ಪಟ್ಟಣದ ತುಂಗಭದ್ರಾ ಬಡಾವಣೆಯಲ್ಲಿರುವ ನೂರು ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ತಾಲ್ಲೂಕು ಆಡಳಿತಾಧಿಕಾರಿ ಡಾ. ಚಂದ್ರಪ್ಪ ಅವರು ಡೆಂಗಿ ರೋಗಿಯೊಬ್ಬರನ್ನು ಪರೀಕ್ಷಿಸುತ್ತಿರುವುದು.
ಹೊನ್ನಾಳಿ ಪಟ್ಟಣದ ತುಂಗಭದ್ರಾ ಬಡಾವಣೆಯಲ್ಲಿರುವ ನೂರು ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ತಾಲ್ಲೂಕು ಆಡಳಿತಾಧಿಕಾರಿ ಡಾ. ಚಂದ್ರಪ್ಪ ಅವರು ಡೆಂಗಿ ರೋಗಿಯೊಬ್ಬರನ್ನು ಪರೀಕ್ಷಿಸುತ್ತಿರುವುದು.   

ಹೊನ್ನಾಳಿ: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಹೊನ್ನಾಳಿ ತಾಲ್ಲೂಕಿನ ವೈದ್ಯರು ತಮ್ಮ ಆಸ್ಪತ್ರೆಯ ಬಾಗಿಲು ಬಂದ್ ಮಾಡಿ ಪ್ರತಿಭಟನೆಗೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದರು.

ಗುರುವಾರ ಪಟ್ಟಣದ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಮುಚ್ಚಿದ್ದರಿಂದ ರೋಗಿಗಳು ಸರ್ಕಾರಿ ಆಸ್ಪತ್ರೆಯ ದಾರಿ ಹಿಡಿಯಬೇಕಾಯಿತು. ಇದರಿಂದಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಶೇ 30 ರಿಂದ 40 ರಷ್ಟು ಹೊರ ರೋಗಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಚಂದ್ರಪ್ಪ ಮಾಹಿತಿ ನೀಡಿದರು.

ಬೆಂಗಳೂರಿನಿಂದ ಬಂದ ಡೆಂಗಿ ರೋಗಿ: ತಾಲ್ಲೂಕಿನ ಘಂಟ್ಯಾಪುರ ಗ್ರಾಮದ ಸುರೇಶ್ ನಾಯ್ಕ ಎಂಬುವವರು ಡೆಂಗಿಗೆ ಬೆಂಗಳೂರಿನ ರಾಜಾ ರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಷ್ಕರದಿಂದಾಗಿ ಅವರಿಗೆ ಚಿಕಿತ್ಸೆ ಲಭ್ಯವಾಗಿಲ್ಲ. ಅಲ್ಲಿಂದ ಅವರನ್ನು ಡಿಸ್‌ಚಾರ್ಜ್ ಮಾಡಿದ್ದರಿಂದ ಅವರು ಗುರುವಾರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.

ADVERTISEMENT

ಗುರುವಾರ 800 ಜನ ರೋಗಿಗಳು: ನ.13 ರಂದು 532 ರೋಗಿಗಳು, 14 ರಂದು 338, 15 ರಂದು 349 ಜನರು ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಡಾ. ಚಂದ್ರಪ್ಪ ಹೇಳಿದರು.

ಸರ್ಕಾರಿ ವೈದ್ಯರಿಗೆ ರಜೆ ಇಲ್ಲ: ಖಾಸಗಿ ವೈದ್ಯರು ಮುಷ್ಕರ ಹಿಂಪಡೆಯುವವರೆಗೂ ಸರ್ಕಾರಿ ವೈದ್ಯರಿಗೆ ರಜೆ ನೀಡುವುದಿಲ್ಲ ಎಂದು ಡಾ. ಚಂದ್ರಪ್ಪ ಸ್ಪಷ್ಟ ಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.